ನಿನ್ನೆಯೂ ಕೂಡ ಪಾಕಿಸ್ತಾನ ನಾಗರಿಕರನ್ನು ಗುರಿಯಾಗಿಸಿ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಅದಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದ್ದು, ಪ್ರತೀಕಾರದ ದಾಳಿ ಮಾಡಿದೆ. ಲಾಹೋರ್, ರಾವಲ್ಪಿಂಡಿಯಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಮಾಹಿತಿ ಕೂಡ ಲಭ್ಯ ಆಗಿದೆ
ಭಾರತದಿಂದ ಕ್ಷಿಪಣಿ ದಾಳಿಯಾಗಿದ್ದು, ಪಾಕಿಸ್ತಾನದ ಮೂರು ವಾಯುನೆಲೆಗಳನ್ನು ಗುರಿಯಾಗಿಸಿಕೊಡು ದಾಳಿ ಮಾಡಲಾಗಿದೆ. ಮುರೀದ್, ನೂರ್‌ಖಾನ್, ರಫೀಖಿ ವಾಯುನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದ್ದು. ಆ ಮೂಲಕ ಪದೇ ಪದೆ ಕೆಣಕಿದ ಪಾಕ್‌ಗೆ ಭಾರತ ಖಡಕ್ ತಿರುಗೇಟು ನೀಡಿದೆ. ಪ್ರತಿದಾಳಿಗೆ ಸಂಬಧಿಸಿ ಭಾರತೀಯ ಸೇನೆಯು ಕೆಲವೇ ಕ್ಷಣದಲ್ಲಿ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ. ಜಮ್ಮುಕಾಶ್ಮೀರ, ಪಂಜಾಬ್, ರಾಜಸ್ಥಾನ ಹಾಗೂ ಗುಜರಾತ್‌ನ 20 ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನವು ಸತತ 2ನೇ ದಿನ ಡ್ರೋಣ್ ದಾಳಿಗೆ ವಿಫಲ ಯತ್ನ ನಡೆಸಿದೆ. ಏಕೆಂದರೆ ಪಾಕಿಸ್ತಾನದ ಡ್ರೋಣ್‌ಗಳು ಗುರಿ ಮುಟ್ಟುವ ಮೊದಲೇ ಭಾರತೀಯ ವಾಯು ಸೇನೆ ಹೊಡೆದುರುಳಿಸಿ ನೆಲಕ್ಕೆ ಕೆಡವಿವೆ. ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್, ಅವಂತಿಪೋರಾದ ವಾಯುನೆಲೆಯ ಮೇಲೆ ಗುರಿಯಾಗಿರಿಸಿಕೊಂಡು ದಾಳಿಗೆ ಯತ್ನಿಸಿತ್ತು. ಆದರೆ ಇದನ್ನು ಮೊದಲೇ ಮನಗಂಡಿದ್ದ ಭಾರತೀಯ ವಾಯು ಸೇನೆ, ಪಾಕಿಸ್ತಾನದ ಎಲ್ಲ ಡ್ರೋನ್‌ಗಳನ್ನು ಛಿದ್ರಛಿದ್ರ ಮಾಡಿದೆ. ಇದರಿಂದ ಬಂದ ದಾರಿಗೆ ಸುಂಕವಿಲ್ಲ ಎಂದು ಪಾಕ್ ಕೊರಗುತ್ತಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…