ಪಾಕ್ ಜಮ್ಮು-ಕಾಶ್ಮೀರದ ಮೇಲೆ ಮತ್ತೆ ಶೆಲ್ ದಾಳಿ ನಡೆಸಿದೆ. ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ವಸತಿ ಕಟ್ಟಡದ ಮೇಲೆ ಶನಿವಾರ ಮುಂಜಾನೆ ಶೆಲ್ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಉನ್ನತ ಮಟ್ಟದ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.

ರಾಜೌರಿ ಪಟ್ಟಣದಲ್ಲಿರುವ ಹೆಚ್ಚುವರಿ ಉಪ ಆಯುಕ್ತ ರಾಜ್ ಕುಮಾರ್ ಥಾಪಾ ಅವರ ಅಧಿಕೃತ ನಿವಾಸಕ್ಕೆ ಫಿರಂಗಿ ಶೆಲ್ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅವರ ಜತೆಗಿದ್ದ ಇಬ್ಬರು ಸಿಬ್ಬಂದಿಗಳಿಗೂ ಗಾಯಗಳಿವೆ. ರಾಜ್ ಕುಮಾರ್ ಥಾಪಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನು ಗಾಯಗೊಂಡಿರುವ ಇಬ್ಬರು ಸಿಬ್ಬಂದಿಗಳ ಸ್ಥಿತಿ ಗಂಭೀರವಾಗಿದೆ. ಇದೀಗ ಈ ಹಿರಿಯ ಅಧಿಕಾರಿಯ ಸಾವಿಗೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿದ್ದಾರೆ.



