ಸಿಬಿಐ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿತ್ತು.
ಜನಪ್ರನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಸದಸ್ಯತ್ವ ರದ್ದಾಗಲಿದೆ. ಜನಾರ್ದನ ರೆಡ್ಡಿ ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರವೂ 6 ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ.



