ಜನ ಮನದ ನಾಡಿ ಮಿಡಿತ

Advertisement

ಶಿರ್ವ: ರಸ್ತೆ ಅಪಘಾತ; ಹಿರಿಯ ಕಾಂಗ್ರೆಸ್ ನಾಯಕಿ ಲೀನಾ ಮಥಾಯಸ್ ಮೃತ್ಯು

ಉಡುಪಿ: ರಸ್ತೆ ಅಫಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ ಲೀನಾ ಮಥಾಯಸ್ ಶಿರ್ವ ಅವರು ಚಿಕಿತ್ಸೆ ಫಲಕಾರಿಯಾಗದೆ  ಕೊನೆಯುಸಿರೆಳೆದಿದ್ದಾರೆ.

ಶಿರ್ವ ಇರ್ಮಿಚಿ ಚರ್ಚ್ ಬಳಿಯ ರೇಚಲ್ ರೆಸ್ಟೋರೆಂಟ್ ಬಳಿ ನಿಂತಿದ್ದ ಲೀನಾ ಮಥಾಯಸ್ ಅವರಿಗೆ ಬೆಳ್ಮಣ್‌ ಕಡೆಯಿಂದ ಶಿರ್ವಕ್ಕೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಇದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಶಿರ್ವ ಪ್ರಾಥಮಿಕ ಕೇಂದ್ರಕ್ಕೆ ಸಾಗಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಅವರು ಮೃತಪಟ್ಟಿದ್ದಾರೆ.

ಲೀನಾ ಮಥಾಯಸ್ ಅವರು ಶಿರ್ವ ಭಾಗದ ಹಿರಿಯ, ಪ್ರಭಾವಿ ಕಾಂಗ್ರೆಸ್ ನಾಯಕಿಯಾಗಿದ್ದು ಉಡುಪಿ ಜಿಲ್ಲಾ ಪರಿಷತ್ ಮಾಜಿ ಉಪಾಧ್ಯಕ್ಷರಾಗಿ, ಶಿರ್ವ ಗ್ರಾಮ ಪಂಚಾಯತ್ ನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!