ಉಡುಪಿ: ರಸ್ತೆ ಅಫಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ ಲೀನಾ ಮಥಾಯಸ್ ಶಿರ್ವ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಶಿರ್ವ ಇರ್ಮಿಚಿ ಚರ್ಚ್ ಬಳಿಯ ರೇಚಲ್ ರೆಸ್ಟೋರೆಂಟ್ ಬಳಿ ನಿಂತಿದ್ದ ಲೀನಾ ಮಥಾಯಸ್ ಅವರಿಗೆ ಬೆಳ್ಮಣ್ ಕಡೆಯಿಂದ ಶಿರ್ವಕ್ಕೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು, ಇದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಶಿರ್ವ ಪ್ರಾಥಮಿಕ ಕೇಂದ್ರಕ್ಕೆ ಸಾಗಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಅವರು ಮೃತಪಟ್ಟಿದ್ದಾರೆ.
ಲೀನಾ ಮಥಾಯಸ್ ಅವರು ಶಿರ್ವ ಭಾಗದ ಹಿರಿಯ, ಪ್ರಭಾವಿ ಕಾಂಗ್ರೆಸ್ ನಾಯಕಿಯಾಗಿದ್ದು ಉಡುಪಿ ಜಿಲ್ಲಾ ಪರಿಷತ್ ಮಾಜಿ ಉಪಾಧ್ಯಕ್ಷರಾಗಿ, ಶಿರ್ವ ಗ್ರಾಮ ಪಂಚಾಯತ್ ನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…