ಕಡಬ,ಸುಬ್ರಹ್ಮಣ್ಯ, ಹಾಸನದಿಂದ ನಾಪತ್ತೆಯಾಗಿದ್ದ ಮಹಿಳೆಯೋರ್ವರ ಮೃತದೇಹ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಹಾಸನ ಸಿಟಿ ನಿವಾಸಿ ಗೀತಾ (51) ಮೃತರು. ಕುಮಾರಧಾರ ನದಿಯಲ್ಲಿ ಅಪರಿಚಿತ ಮಹಿಳೆಯೋರ್ವರ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ, ಪತ್ತೆ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆ ಹಾಸನದ ತಂಡ ಆಗಮಿಸಿ ಮಹಿಳೆಯ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ.
ಗೀತಾ ಅವರು ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಎರಡು ದಿನದ ಹಿಂದೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಕೌಟಂಬಿಕ ಮನಸ್ಥಾಪದಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಮನೆಯವರು ವಿವಿಧೆಡೆ ಹುಡುಕಾಟ ನಡೆಸಿ, ಪೊಲೀಸ್ ಮಾಹಿತಿಯಂತೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…