ಜನ ಮನದ ನಾಡಿ ಮಿಡಿತ

Advertisement

ಸಸ್ಯವಿಜ್ಞಾನಿ ಡಾ.ಸೂರ್ಯಪ್ರಕಾಶ್‌ ಶೆಣೈ ಇನ್ನು ನೆನಪು ಮಾತ್ರ

ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರು ಇಂದು ಬೆಳಿಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅಗಲಿದ್ದಾರೆ ಎಂಬ ದುಃಖದ ಸುದ್ದಿಯನ್ನು ತಿಳಿಸುವುದು ತುಂಬಾ ನೋವಿನ ವಿಷಯವಾಗಿದೆ.


ಪಶ್ಚಿಮ ಘಟ್ಟದ ಸಸ್ಯಸಂಪತ್ತಿಗೆ ಜೀವ ನೀಡುವಂತೆ, ಪಿಲಿಕುಳದ 85 ಎಕರೆ ಪ್ರದೇಶದಲ್ಲಿ ಸ್ಥಾಪಿತವಾಗಿರುವ ‘ಸಸ್ಯಕಾಶಿ’ ಎಂಬ ಸಸ್ಯೋದ್ಯಾನ ನಿರ್ಮಾಣದಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಿಗೆ ಭೇಟಿನೀಡಿ, ಬೀಜ ಸಂಗ್ರಹಿಸಿ ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಮತ್ತು ಜೀವವೈವಿಧ್ಯ ರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದರು.ಅವರು ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಮೊದಲ ಎಂ.ಎಸ್ಸಿ. (1988–90) ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದು, ನಂತರ ಅದೇ ವಿಭಾಗದಿಂದ ಎಂ.ಫಿಲ್ ಹಾಗೂ ಪಿ.ಎಚ್.ಡಿ ಪದವಿಗಳನ್ನು ಗಳಿಸಿದರು. ತಮ್ಮ ಶೋಧನೆಗಳ ಮೂಲಕ ಅನೇಕ ನಶಿಸಿಹೋಗುತ್ತಿರುವ ಹಾಗೂ ಅಪರೂಪದ ಸ್ಥಳೀಯ ಪ್ರಬೇಧದ ಸಸ್ಯಗಳನ್ನು ಪುನಶ್ಚೇತನಗೊಳಿಸಿ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ಅನೇಕ ವೈಜ್ಞಾನಿಕ ಲೇಖನಗಳನ್ನು ಪ್ರಕಟಿಸಿದರು.

ಇಸವಿ 2000ರಲ್ಲಿ INEP ಪ್ರಾಯೋಜಿತ ಸಸ್ಯಕಾಶಿಯ ಸ್ಥಾಪನೆಯಿಂದ ಆರಂಭವಾಗಿ, 2011ರಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಸಹಾಯದಿಂದ ಪಿಲಿಕುಳದ ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಸ್ಥಾಪನೆಗೊಳ್ಳುವವರೆಗೆ ಅವರ ವೃತ್ತಿಪರ ಕಾರ್ಯಕ್ಷೇತ್ರ ಶ್ರೀಮಂತವಾಗಿತ್ತು. ಅವರು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕೇವಲ ಸಂಶೋಧಕನಾಗಿ ಮಾತ್ರವಲ್ಲ, ಮಾರ್ಗದರ್ಶಕನಾಗಿ ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ದೀಪವಾಗಿದ್ದರು.

ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಆಯುರ್ವೇದ ವಿದ್ಯಾರ್ಥಿಗಳಿಗಾಗಿ ಪರಿಸರ ಮತ್ತು ಸಸ್ಯಸಂರಕ್ಷಣೆಯ ಕುರಿತು ಹಲವು ತರಬೇತಿ ಶಿಬಿರಗಳನ್ನು, ಕಾರ್ಯಾಗಾರಗಳನ್ನು ಅವರು ನಡೆಸಿಕೊಟ್ಟಿದ್ದಾರೆ.
ಈ ರೀತಿಯ ವೈಜ್ಞಾನಿಕತೆಯೊಂದಿಗೆ ಮಾನವೀಯತೆಯನ್ನೂ ಹೊಂದಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರ ಅಗಲಿಕೆ ತೀವ್ರ ಶೂನ್ಯವನ್ನು ಸೃಷ್ಟಿಸಿದೆ. ಅವರು ನೀಡಿದ ಕೊಡುಗೆಗಳು ಸದಾ ನಮ್ಮ ನೆನಪಿನಲ್ಲಿ ಜೀವಂತವಾಗಿರುತ್ತವೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!