ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರು ಇಂದು ಬೆಳಿಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅಗಲಿದ್ದಾರೆ ಎಂಬ ದುಃಖದ ಸುದ್ದಿಯನ್ನು ತಿಳಿಸುವುದು ತುಂಬಾ ನೋವಿನ ವಿಷಯವಾಗಿದೆ.
ಪಶ್ಚಿಮ ಘಟ್ಟದ ಸಸ್ಯಸಂಪತ್ತಿಗೆ ಜೀವ ನೀಡುವಂತೆ, ಪಿಲಿಕುಳದ 85 ಎಕರೆ ಪ್ರದೇಶದಲ್ಲಿ ಸ್ಥಾಪಿತವಾಗಿರುವ ‘ಸಸ್ಯಕಾಶಿ’ ಎಂಬ ಸಸ್ಯೋದ್ಯಾನ ನಿರ್ಮಾಣದಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಿಗೆ ಭೇಟಿನೀಡಿ, ಬೀಜ ಸಂಗ್ರಹಿಸಿ ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಮತ್ತು ಜೀವವೈವಿಧ್ಯ ರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದರು.ಅವರು ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಮೊದಲ ಎಂ.ಎಸ್ಸಿ. (1988–90) ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದು, ನಂತರ ಅದೇ ವಿಭಾಗದಿಂದ ಎಂ.ಫಿಲ್ ಹಾಗೂ ಪಿ.ಎಚ್.ಡಿ ಪದವಿಗಳನ್ನು ಗಳಿಸಿದರು. ತಮ್ಮ ಶೋಧನೆಗಳ ಮೂಲಕ ಅನೇಕ ನಶಿಸಿಹೋಗುತ್ತಿರುವ ಹಾಗೂ ಅಪರೂಪದ ಸ್ಥಳೀಯ ಪ್ರಬೇಧದ ಸಸ್ಯಗಳನ್ನು ಪುನಶ್ಚೇತನಗೊಳಿಸಿ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ಅನೇಕ ವೈಜ್ಞಾನಿಕ ಲೇಖನಗಳನ್ನು ಪ್ರಕಟಿಸಿದರು.
ಇಸವಿ 2000ರಲ್ಲಿ INEP ಪ್ರಾಯೋಜಿತ ಸಸ್ಯಕಾಶಿಯ ಸ್ಥಾಪನೆಯಿಂದ ಆರಂಭವಾಗಿ, 2011ರಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಸಹಾಯದಿಂದ ಪಿಲಿಕುಳದ ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಸ್ಥಾಪನೆಗೊಳ್ಳುವವರೆಗೆ ಅವರ ವೃತ್ತಿಪರ ಕಾರ್ಯಕ್ಷೇತ್ರ ಶ್ರೀಮಂತವಾಗಿತ್ತು. ಅವರು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕೇವಲ ಸಂಶೋಧಕನಾಗಿ ಮಾತ್ರವಲ್ಲ, ಮಾರ್ಗದರ್ಶಕನಾಗಿ ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ದೀಪವಾಗಿದ್ದರು.
ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಆಯುರ್ವೇದ ವಿದ್ಯಾರ್ಥಿಗಳಿಗಾಗಿ ಪರಿಸರ ಮತ್ತು ಸಸ್ಯಸಂರಕ್ಷಣೆಯ ಕುರಿತು ಹಲವು ತರಬೇತಿ ಶಿಬಿರಗಳನ್ನು, ಕಾರ್ಯಾಗಾರಗಳನ್ನು ಅವರು ನಡೆಸಿಕೊಟ್ಟಿದ್ದಾರೆ.
ಈ ರೀತಿಯ ವೈಜ್ಞಾನಿಕತೆಯೊಂದಿಗೆ ಮಾನವೀಯತೆಯನ್ನೂ ಹೊಂದಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರ ಅಗಲಿಕೆ ತೀವ್ರ ಶೂನ್ಯವನ್ನು ಸೃಷ್ಟಿಸಿದೆ. ಅವರು ನೀಡಿದ ಕೊಡುಗೆಗಳು ಸದಾ ನಮ್ಮ ನೆನಪಿನಲ್ಲಿ ಜೀವಂತವಾಗಿರುತ್ತವೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…