ಜನ ಮನದ ನಾಡಿ ಮಿಡಿತ

Advertisement

ಸಸ್ಯವಿಜ್ಞಾನಿ ಡಾ.ಸೂರ್ಯಪ್ರಕಾಶ್‌ ಶೆಣೈ ಇನ್ನು ನೆನಪು ಮಾತ್ರ

ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರು ಇಂದು ಬೆಳಿಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅಗಲಿದ್ದಾರೆ ಎಂಬ ದುಃಖದ ಸುದ್ದಿಯನ್ನು ತಿಳಿಸುವುದು ತುಂಬಾ ನೋವಿನ ವಿಷಯವಾಗಿದೆ.

 


ಪಶ್ಚಿಮ ಘಟ್ಟದ ಸಸ್ಯಸಂಪತ್ತಿಗೆ ಜೀವ ನೀಡುವಂತೆ, ಪಿಲಿಕುಳದ 85 ಎಕರೆ ಪ್ರದೇಶದಲ್ಲಿ ಸ್ಥಾಪಿತವಾಗಿರುವ ‘ಸಸ್ಯಕಾಶಿ’ ಎಂಬ ಸಸ್ಯೋದ್ಯಾನ ನಿರ್ಮಾಣದಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಿಗೆ ಭೇಟಿನೀಡಿ, ಬೀಜ ಸಂಗ್ರಹಿಸಿ ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಮತ್ತು ಜೀವವೈವಿಧ್ಯ ರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದರು.
ಅವರು ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಮೊದಲ ಎಂ.ಎಸ್ಸಿ. (1988–90) ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದು, ನಂತರ ಅದೇ ವಿಭಾಗದಿಂದ ಎಂ.ಫಿಲ್ ಹಾಗೂ ಪಿ.ಎಚ್.ಡಿ ಪದವಿಗಳನ್ನು ಗಳಿಸಿದರು. ತಮ್ಮ ಶೋಧನೆಗಳ ಮೂಲಕ ಅನೇಕ ನಶಿಸಿಹೋಗುತ್ತಿರುವ ಹಾಗೂ ಅಪರೂಪದ ಸ್ಥಳೀಯ ಪ್ರಬೇಧದ ಸಸ್ಯಗಳನ್ನು ಪುನಶ್ಚೇತನಗೊಳಿಸಿ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ಅನೇಕ ವೈಜ್ಞಾನಿಕ ಲೇಖನಗಳನ್ನು ಪ್ರಕಟಿಸಿದರು.
ಇಸವಿ 2000ರಲ್ಲಿ INEP ಪ್ರಾಯೋಜಿತ ಸಸ್ಯಕಾಶಿಯ ಸ್ಥಾಪನೆಯಿಂದ ಆರಂಭವಾಗಿ, 2011ರಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಸಹಾಯದಿಂದ ಪಿಲಿಕುಳದ ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಸ್ಥಾಪನೆಗೊಳ್ಳುವವರೆಗೆ ಅವರ ವೃತ್ತಿಪರ ಕಾರ್ಯಕ್ಷೇತ್ರ ಶ್ರೀಮಂತವಾಗಿತ್ತು. ಅವರು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕೇವಲ ಸಂಶೋಧಕನಾಗಿ ಮಾತ್ರವಲ್ಲ, ಮಾರ್ಗದರ್ಶಕನಾಗಿ ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ದೀಪವಾಗಿದ್ದರು.
ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಆಯುರ್ವೇದ ವಿದ್ಯಾರ್ಥಿಗಳಿಗಾಗಿ ಪರಿಸರ ಮತ್ತು ಸಸ್ಯಸಂರಕ್ಷಣೆಯ ಕುರಿತು ಹಲವು ತರಬೇತಿ ಶಿಬಿರಗಳನ್ನು, ಕಾರ್ಯಾಗಾರಗಳನ್ನು ಅವರು ನಡೆಸಿಕೊಟ್ಟಿದ್ದಾರೆ.
ಈ ರೀತಿಯ ವೈಜ್ಞಾನಿಕತೆಯೊಂದಿಗೆ ಮಾನವೀಯತೆಯನ್ನೂ ಹೊಂದಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರ ಅಗಲಿಕೆ ತೀವ್ರ ಶೂನ್ಯವನ್ನು ಸೃಷ್ಟಿಸಿದೆ. ಅವರು ನೀಡಿದ ಕೊಡುಗೆಗಳು ಸದಾ ನಮ್ಮ ನೆನಪಿನಲ್ಲಿ ಜೀವಂತವಾಗಿರುತ್ತವೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!