ಡಾ. ಶಿವರಾಮ ಕಾರಂತ ನಿಸರ್ಗಧಾಮದ ಸಸ್ಯಶಾಸ್ತ್ರ ವಿಭಾಗದಲ್ಲಿ ಪ್ರಧಾನ ವಿಜ್ಞಾನಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರು ಇಂದು ಬೆಳಿಗ್ಗೆ ಕಡಬದ ಹೊಸ್ಮಠದಲ್ಲಿ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅಗಲಿದ್ದಾರೆ ಎಂಬ ದುಃಖದ ಸುದ್ದಿಯನ್ನು ತಿಳಿಸುವುದು ತುಂಬಾ ನೋವಿನ ವಿಷಯವಾಗಿದೆ.
ಪಶ್ಚಿಮ ಘಟ್ಟದ ಸಸ್ಯಸಂಪತ್ತಿಗೆ ಜೀವ ನೀಡುವಂತೆ, ಪಿಲಿಕುಳದ 85 ಎಕರೆ ಪ್ರದೇಶದಲ್ಲಿ ಸ್ಥಾಪಿತವಾಗಿರುವ ‘ಸಸ್ಯಕಾಶಿ’ ಎಂಬ ಸಸ್ಯೋದ್ಯಾನ ನಿರ್ಮಾಣದಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಗಳಿಗೆ ಭೇಟಿನೀಡಿ, ಬೀಜ ಸಂಗ್ರಹಿಸಿ ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಮತ್ತು ಜೀವವೈವಿಧ್ಯ ರಕ್ಷಣೆಗೆ ಅಪಾರ ಕೊಡುಗೆ ನೀಡಿದ್ದರು.
ಅವರು ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಮೊದಲ ಎಂ.ಎಸ್ಸಿ. (1988–90) ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದು, ನಂತರ ಅದೇ ವಿಭಾಗದಿಂದ ಎಂ.ಫಿಲ್ ಹಾಗೂ ಪಿ.ಎಚ್.ಡಿ ಪದವಿಗಳನ್ನು ಗಳಿಸಿದರು. ತಮ್ಮ ಶೋಧನೆಗಳ ಮೂಲಕ ಅನೇಕ ನಶಿಸಿಹೋಗುತ್ತಿರುವ ಹಾಗೂ ಅಪರೂಪದ ಸ್ಥಳೀಯ ಪ್ರಬೇಧದ ಸಸ್ಯಗಳನ್ನು ಪುನಶ್ಚೇತನಗೊಳಿಸಿ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ನಿಯತಕಾಲಿಕೆಗಳಲ್ಲಿ ಅನೇಕ ವೈಜ್ಞಾನಿಕ ಲೇಖನಗಳನ್ನು ಪ್ರಕಟಿಸಿದರು.
ಇಸವಿ 2000ರಲ್ಲಿ INEP ಪ್ರಾಯೋಜಿತ ಸಸ್ಯಕಾಶಿಯ ಸ್ಥಾಪನೆಯಿಂದ ಆರಂಭವಾಗಿ, 2011ರಲ್ಲಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಸಹಾಯದಿಂದ ಪಿಲಿಕುಳದ ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ ಸ್ಥಾಪನೆಗೊಳ್ಳುವವರೆಗೆ ಅವರ ವೃತ್ತಿಪರ ಕಾರ್ಯಕ್ಷೇತ್ರ ಶ್ರೀಮಂತವಾಗಿತ್ತು. ಅವರು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕೇವಲ ಸಂಶೋಧಕನಾಗಿ ಮಾತ್ರವಲ್ಲ, ಮಾರ್ಗದರ್ಶಕನಾಗಿ ಅನೇಕ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ದೀಪವಾಗಿದ್ದರು.
ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಆಯುರ್ವೇದ ವಿದ್ಯಾರ್ಥಿಗಳಿಗಾಗಿ ಪರಿಸರ ಮತ್ತು ಸಸ್ಯಸಂರಕ್ಷಣೆಯ ಕುರಿತು ಹಲವು ತರಬೇತಿ ಶಿಬಿರಗಳನ್ನು, ಕಾರ್ಯಾಗಾರಗಳನ್ನು ಅವರು ನಡೆಸಿಕೊಟ್ಟಿದ್ದಾರೆ.
ಈ ರೀತಿಯ ವೈಜ್ಞಾನಿಕತೆಯೊಂದಿಗೆ ಮಾನವೀಯತೆಯನ್ನೂ ಹೊಂದಿದ್ದ ಡಾ. ಸೂರ್ಯಪ್ರಕಾಶ್ ಶೆಣೈ ಅವರ ಅಗಲಿಕೆ ತೀವ್ರ ಶೂನ್ಯವನ್ನು ಸೃಷ್ಟಿಸಿದೆ. ಅವರು ನೀಡಿದ ಕೊಡುಗೆಗಳು ಸದಾ ನಮ್ಮ ನೆನಪಿನಲ್ಲಿ ಜೀವಂತವಾಗಿರುತ್ತವೆ.
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…
ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ…