ಬಂಟ್ವಾಳ: ಸಾರ್ವಜನಿಕವಾಗಿಯೇ ಮಹಿಳೆಗೆ ಗುಪ್ತಾಂಗ ತೋರಿಸಿ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಕೃತಿ ಮೆರೆದಿರುವ ಘಟನೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ನಡೆದಿದೆ. ಈ ಘಟನೆ ಸಂಬಂಧ ಉಪಾಧ್ಯಕ್ಷ ಪದ್ಮನಾಭ ಸಫಲ್ಯನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ರಸ್ತೆ ವಿವಾದಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆಸಿದೆ. ಮನೆ ದಾರಿಗೆ ಗೇಟು ಅಳವಡಿಸಿದ್ದನ್ನು ಪ್ರಶ್ನಿಸಿದ್ದ ಮಹಿಳೆಗೆ ಪದ್ಮನಾಭ ಸಫಲ್ಯ ತನ್ನ ಗುಪ್ತಾಂಗ ತೋರಿಸಿದ್ದಾನೆ. ಈ ಸಂಬಂಧ ಮಹಿಳೆ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತೋಟದಲ್ಲಿ ತಾನು ಕೆಲಸ ಮಾಡುತ್ತಿದ್ದಾಗ ನಮ್ಮ ಮನೆಯ ದಾರಿಯಲ್ಲಿ ಗೇಟು ಅಳವಡಿಸುತ್ತಿದ್ದ ಶಬ್ದ ಕೇಳಿಸಿತು. ಅಲ್ಲಿಗೆ ತೆರಳಿ ಅದನ್ನು ವಿಡಿಯೋ ಮಾಡುತ್ತಿದ್ದಾಗ ಪದ್ಮನಾಭ ತನ್ನ ಚಡ್ಡಿಯನ್ನು ಜಾರಿಸಿ ಮಾರ್ಮಾಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಹಿನ್ನೆಯಲ್ಲಿ ಪದ್ಮನಾಭ ಸಪಲ್ಯನನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜರೆಮಾರು ತಿಳಿಸಿದ್ದಾರೆ. ಅಲ್ಲದೆ ಪಂಚಾಯತ್ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವಂತೆ ದಯಾನಂದ ಶೆಟ್ಟಿ ಸೂಚಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…