ಚಿಕ್ಕಮಗಳೂರಿನಲ್ಲಿ ಕೆಲವು ಮಂದಿ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಚಿಕ್ಕಮಗಳೂರಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಲಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಹಸು ಮೃತಪಟ್ಟಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಶೇಖರಪ್ಪ ಎಂಬುವವರಿಗೆ ಸೇರಿದ ಹಸುವನ್ನು ರಾತ್ರೋರಾತ್ರಿ ಹಸು ಕಳವು ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆದರೆ, ಕಳ್ಳತನ ಯತ್ನ ವಿಫಲವಾದಾಗ ರೋಷದಿಂದ ಹಸುವಿನ ಕೆಚ್ಚಲು ಕತ್ತರಿಸಿ ಕಳ್ಳರು ಪರಾರಿಯಾಗಿದ್ದಾರೆ. ಪರಿಣಾಮವಾಗಿ ಹಸು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ.
ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಿರಂತರವಾಗಿ ಜಾನುವಾರುಗಳ ಕಳ್ಳತನ ಮಾಡಲಾಗುತ್ತಿದೆ. ಆದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…