ಜನ ಮನದ ನಾಡಿ ಮಿಡಿತ

Advertisement

ಜು.23ರಂದು ವಾಮದಪದವು ಬಂಟರ ಸಂಘದಿಂದ “ಪದವುಡು ಆಟಿದ ಕೂಟ”; ಹಿರಿಯರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬಂಟರ ಸಂಘ, ವಾಮದ ಪದವು ವಲಯದ ವತಿಯಿಂದ ‘ಪದವುಡು ಆಟಿದ ಕೂಟ’ ಎಂಬ ಅದ್ದೂರಿ ಕಾರ್ಯಕ್ರಮ ಇದೇ 23-07-2023ರ ರವಿವಾರ ನಡೆಯಲಿದೆ. ವಾಮದಪದವಿನ ಆಲದಪದವಿನ ರಾಯಿ-ಮೂರ್ಜೆ ರಸ್ತೆ ಬಳಿಯ ಸಂಘದ ನಿವೇಶನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಎಂ. ಮೋಹನ್ ಆಳ್ವಾ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಣಿ ವಲಯ ಬಂಟರ ಸಂಘದ ಉಪಾಧ್ಯಕ್ಷರು, ಕವಯತ್ರಿ ಹಾಗೂ ಬರಹಗಾರ್ತಿ ವಿಂದ್ಯಾ ಎಸ್. ರೈಯವರು ಮುಖ್ಯ ಭಾಷಣಕಾರರಾಗಿ ಉಪನ್ಯಾಸ ನೀಡಲಿದ್ದಾರೆ.
ಮಾಜಿ ಸಚಿವ ಬಿ, ರಮಾನಾಥ ರೈ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸೀತಾರಾಮ್ ರೈ ಸವಣೂರು, ಬೆಳ್ತಂಗಡಿಯ ವಿಜಯ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯರಾಮ್ ಶೆಟ್ಟಿ, ವಾಮದಪದವು ಟಿಎಸ್‍ಎನ್ ಇಂಡಸ್ಟ್ರೀಸ್ ಮಾಲಕ ಧೀರಜ್ ನಾಯ್ಕ್, ಬಂಟ್ವಾಳ ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್. ಭಂಡಾರಿ, ಮಾಜಿ ಅಧ್ಯಕ್ಷ ಕಿರಣ್ ಹೆಗ್ಡೆ, ಕಾವಳಕಟ್ಟೆ ವಲಯ ಬಂಟರ ಸಂಘದ ಗೌರವಾಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ತಾಲೂಕು ಬಂಟರ ಸಂಘದ ಯುವ ಘಟಕದ ಅಧ್ಯಕ್ಷ ನಿಶಾನ್ ಆಳ್ವ ಮುಂತಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಲಯದ ಹಿರಿಯ ಬಂಟ ಬಂಧುಗಳಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಬಂಟರ ಸಂಘ ವಾಮದಪದವು ವಲಯ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಗೌರವಾಧ್ಯಕ್ಷ ಅಮ್ಮು ರೈ ಹರ್ಕಾಡಿ ಮತ್ತು ವಾಮದಪದವು ಬಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಬುಳೇರಿ ಇವರುಗಳ ಜಂಟಿ ಪ್ರಕಟನೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!