ಬಂಟರ ಸಂಘ, ವಾಮದ ಪದವು ವಲಯದ ವತಿಯಿಂದ ‘ಪದವುಡು ಆಟಿದ ಕೂಟ’ ಎಂಬ ಅದ್ದೂರಿ ಕಾರ್ಯಕ್ರಮ ಇದೇ 23-07-2023ರ ರವಿವಾರ ನಡೆಯಲಿದೆ. ವಾಮದಪದವಿನ ಆಲದಪದವಿನ ರಾಯಿ-ಮೂರ್ಜೆ ರಸ್ತೆ ಬಳಿಯ ಸಂಘದ ನಿವೇಶನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಎಂ. ಮೋಹನ್ ಆಳ್ವಾ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಣಿ ವಲಯ ಬಂಟರ ಸಂಘದ ಉಪಾಧ್ಯಕ್ಷರು, ಕವಯತ್ರಿ ಹಾಗೂ ಬರಹಗಾರ್ತಿ ವಿಂದ್ಯಾ ಎಸ್. ರೈಯವರು ಮುಖ್ಯ ಭಾಷಣಕಾರರಾಗಿ ಉಪನ್ಯಾಸ ನೀಡಲಿದ್ದಾರೆ.
ಮಾಜಿ ಸಚಿವ ಬಿ, ರಮಾನಾಥ ರೈ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸೀತಾರಾಮ್ ರೈ ಸವಣೂರು, ಬೆಳ್ತಂಗಡಿಯ ವಿಜಯ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯರಾಮ್ ಶೆಟ್ಟಿ, ವಾಮದಪದವು ಟಿಎಸ್‍ಎನ್ ಇಂಡಸ್ಟ್ರೀಸ್ ಮಾಲಕ ಧೀರಜ್ ನಾಯ್ಕ್, ಬಂಟ್ವಾಳ ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್. ಭಂಡಾರಿ, ಮಾಜಿ ಅಧ್ಯಕ್ಷ ಕಿರಣ್ ಹೆಗ್ಡೆ, ಕಾವಳಕಟ್ಟೆ ವಲಯ ಬಂಟರ ಸಂಘದ ಗೌರವಾಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ತಾಲೂಕು ಬಂಟರ ಸಂಘದ ಯುವ ಘಟಕದ ಅಧ್ಯಕ್ಷ ನಿಶಾನ್ ಆಳ್ವ ಮುಂತಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಲಯದ ಹಿರಿಯ ಬಂಟ ಬಂಧುಗಳಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಬಂಟರ ಸಂಘ ವಾಮದಪದವು ವಲಯ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಗೌರವಾಧ್ಯಕ್ಷ ಅಮ್ಮು ರೈ ಹರ್ಕಾಡಿ ಮತ್ತು ವಾಮದಪದವು ಬಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಬುಳೇರಿ ಇವರುಗಳ ಜಂಟಿ ಪ್ರಕಟನೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…