ಪುತ್ತೂರು: ನಗರಸಭೆ, ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಸಹಯೋಗದಲ್ಲಿ ಸಂಸಾರ ಜೋಡುಮಾರ್ಗ ತಂಡದಿಂದ ಘನತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿಯ ಬೀದಿ ನಾಟಕವನ್ನು ಪುತ್ತೂರು ನಗರದ ವಿವಿಧೆಡೆಗಳಲ್ಲಿ ಆಯೋಜಿಸಲಾಗಿದ್ದು, ಕಿಲ್ಲೆ ಮೈದಾನದ ಸಂತೆಯ ಮಧ್ಯೆ ವ್ಯಾಪಾರಿಗಳು ಹಾಗೂ ಗ್ರಾಹಕರ ಗಮನಸೆಳೆಯಲಾಯಿತು.
ಮೌನೇಶ್ ವಿಶ್ವಕರ್ಮ ಅವರ ನೇತೃತ್ವದಲ್ಲಿ ತ್ಯಾಜ್ಯಗಳ ಬೇರ್ಪಡಿಸುವಿಕೆ, ಸಮರ್ಪಕ ವಿಲೇವಾರಿ, ವ್ಯಾಪಕ ಪ್ಲಾಸ್ಟಿಕ್ ಬಳಕೆಯಿಂದ ಸಮಾಜದಲ್ಲಿ ಉಂಟಾಗುತ್ತಿರುವ ಸಮಸ್ಯೆ, ಸಂಕಷ್ಟಗಳ ಕುರಿತು ಗಮನಸೆಳೆಯುವ ನಾಟಕವನ್ನು ಪ್ರಸ್ತುತಪಡಿಸಲಾಯಿತು.
ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್‍ನ ಡಾ. ರಾಜೇಶ್ ಬೆಜ್ಜಂಗಳ, ನಗರಸಭಾ ಸದಸ್ಯ ಯೂಸುಫ್, ಎಂಜಿನಿಯರ್‍ಗಳಾದ ದುರ್ಗಾ ಪ್ರಸಾದ್, ರಾಮಚಂದ್ರ, ಶ್ವೇತಾ ಕಿರಣ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…