ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನು ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು. ಇದಕ್ಕಾಗಿ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವ ಕೇಂದ್ರ ಸ್ಥಾಪಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ಆರೋಗ್ಯಸೌಧದಲ್ಲಿ ಸೋಮವಾರ ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು. ಈ ಬಗ್ಗೆ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಏಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ರಾಜ್ಯದಲ್ಲಿ ಅಂಗಾಂಗ ದಾನ ಮತ್ತು ಕಸಿ ಪ್ರಯತ್ನಗಳನ್ನು ಹೆಚ್ಚಿಸುವ ಗುರಿ ಸಾಧಿಸಲು ಪ್ರಯತ್ನಿಸಬೇಕು. ಇದಕ್ಕಾಗಿ ಜೀವಸಾರ್ಥಕತೆ ಸೊಸೈಟಿಯ ನೋಂದಣಿ ಪ್ರಕ್ರಿಯೆ, ಕಾರ್ಯಾಚರಣೆಯಲ್ಲಿ ವೇಗ ತರಬೇಕು. ಜತೆಗೆ ಸ್ಟೀರಿಂಗ್ ಸಮಿತಿಯನ್ನು ರಚಿಸಿ ಅಂಗಾಂಗ ವಿತರಣೆ ಸಮರ್ಪಕವಾಗಿ ಒದಗಿಸಲು ಮೂತ್ರಪಿಂಡ ಹಂಚಿಕೆ ನೀತಿಯನ್ನು ಸಹ ಪರಿಷ್ಕರಣೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚಿಸಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…