ಕರಾವಳಿ

ಮೇ 17ರಂದು ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 17ರಂದು ಉಡುಪಿಯ ಕೊಡವೂರು ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರವಿರಾಜ್ ಎಚ್.ಪಿ. ಹೇಳಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 8.15 ರಿಂದ ರಾತ್ರಿ 8:15 ರವರೆಗೆ ನಿರಂತರ 12 ಗಂಟೆಗಳ ಕಾರ್ಯಕ್ರಮ ನಡೆಯಲಿದೆ. ಮಲ್ಪೆಯ ಸಿಟಿಜನ್ ಸರ್ಕಲ್ ನಿಂದ ಮೆರವಣಿಗೆಯೊಂದಿಗೆ ಸಮ್ಮೇಳನಾಧ್ಯಕ್ಷರಾದ ಪ್ರೊ. ಎಂ.ಎಲ್. ಸಾಮಗ ಅವರನ್ನು ಸ್ವಾಗತಿಸಲಾಗುವುದು. 9:25ಕ್ಕೆ ಧ್ವಜಾರೋಹಣ, ಹಾಗೂ ಪರಿಷತ್ ಧ್ವಜಾ ರೋಹಣ ನಡೆಯಲಿದೆ ಎಂದರು.
ಬೆಳಿಗ್ಗೆ 9:30ಕ್ಕೆ ನೃತ್ಯನಿಕೇತನ ಕೊಡವೂರು ಇವರಿಂದ ನೃತ್ಯ ಸಿಂಚನ ನಡೆಯಲಿದೆ. 9.50ಕ್ಕೆ ಸರಿಯಾಗಿ ದಿ. ಕುರಾಡಿ ಸೀತಾರಾಮ ಅಡಿಗ ನೆನಪಿನ ಪುಸ್ತಕ ಮಳಿಗೆಯ ಉದ್ಘಾಟನೆಯನ್ನು ಸಾಹಿತಿ ಡಾ. ಗಣನಾಥ್ ಎಕ್ಕಾರ್ ನೆರ ವೇರಿಸಲಿದ್ದಾರೆ. ನಂತರ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದ್ದು ಕನ್ನಡದ ಹಿರಿಯ ವಿಮರ್ಶಕ ಎಸ್ ಆರ್ ವಿಜಯಶಂಕರ್ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಹಿರಿಯ ಸಾಹಿತಿ ಎಚ್. ಡುಂಡಿರಾಜ್ ಉಪಸ್ಥಿತರಿರಲಿದ್ದಾರೆ. ಈ ಸಂದರ್ಭದಲ್ಲಿ ಸಾಧಕರಾದ ಜಯನ್ ಮಲ್ಪೆ , ಸಿ. ಎಸ್. ರಾವ್, ವಿ.ಜಿ. ಶೆಟ್ಟಿ, ಭುವನ ಪ್ರಸಾದ್ ಹೆಗ್ಡೆ, ಹರಿಪ್ರಸಾದ್ ರೈ, ವಾದಿರಾಜ್ ಭಟ್, ವೆಂಕಟೇಶ್ ಪೈ, ವಿನಯ್ ಆಚಾರ್ಯ ಮುಂಡ್ಕೂರ್ ಇವರನ್ನು ಅಭಿನಂದಿಸಲಾಗುವುದು. ಇದೇ ಸಂದರ್ಭದಲ್ಲಿ ನಾಲ್ಕು ಪುಸ್ತಕಗಳು ಲೋಕಾರ್ಪಣೆಗೊಳ್ಳಲಿದೆ. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಶಿಷ್ಟ ರೀತಿಯ ಯಕ್ಷ ಕವಿಗೋಷ್ಠಿ, ಯಕ್ಷಗಾನ, ದೃಶ್ಯ ಭಾಷೆ ಸಂಸ್ಕೃತಿ ಇದರ ಕುರಿತಾದ ವಿಚಾರಗೋಷ್ಠಿ ,ಸಮ್ಮೇಳನ ಅಧ್ಯಕ್ಷರೊಂದಿಗೆ ಮಾತುಕತೆ ನಡೆಯಲಿದೆ ಎಂದು ತಿಳಿಸಿದರು.
ಸಂಜೆ ತಾಲೂಕು ಅಧ್ಯಕ್ಷ ರವಿರಾಜ್ ಎಚ್ ಪಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸುಬ್ರಮಣ್ಯ ಜಿ. ಕುರ್ಯ (ಪತ್ರಿಕಾ ರಂಗ) ,ಡೊನಾಥ್ ಡಿ. ಅಲ್ಮೇಡಾ (ಸಾಹಿತ್ಯ), ಮಂಜುನಾಥ್ ಭಟ್ ಮೂಡುಬೆಟ್ಟು (ಯೋಗ), ನಾರಾಯಣ ಸರಳಾಯ ( ಸಂಗೀತ), ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯ (ಸಮಷ್ಟಿ), ಚಂದ್ರ ಚಿತ್ತ (ಚಿತ್ರಕಲೆ), ಅನಿಲ್ ಶಂಕರ್ (ದೃಶ್ಯಮಾಧ್ಯಮ), ಪ್ರಕಾಶ್ ಕೊಡಂಕೂರು (ಛಾಯಾಚಿತ್ರ ಮಾಧ್ಯಮ), ಡಾ. ಸುರೇಶ್ ಶೆಣೈ (ವೈದ್ಯಕೀಯ), ಮಂಜುನಾಥ್ ಕಾಮತ್ (ಸಾಮಾಜಿಕ ಜಾಲತಾಣ), ಬಾಲಕೃಷ್ಣ ಕೊಡವೂರು (ರಂಗ ನಟ), ಬಾಲಕೃಷ್ಣ ಮೆಂಡನ್ (ಆಹಾರೋದ್ಯಮ), ರಮೇಶ್ ಮಂಚಿ ( ರಂಗಭೂಮಿ), ಪ್ರಶಾಂತ್ ಕಡಿಯಾಳಿ (ನೃತ್ಯ ), ವಿದುಷಿ ಶಾಂಭವಿ ಆಚಾರ್ಯ (ಭರತನಾಟ್ಯ ), ಕುಸುಮ ಕಾಮತ್ (ಸಾಂಸ್ಕೃತಿಕ ), ವಾಣಿ ಬಾಲಚಂದ್ರ (ಕ್ರೀಡೆ), ಸ್ವರಾಜ್ಯ ಲಕ್ಷ್ಮಿ ಅಲೆವೂರು (ಕಿರುತೆರೆ), ಕುಮಾರಿ ಅವನಿ ಗಣೇಶ್ ಕಲ್ಮಾಡಿ ( ಕ್ರೀಡೆ ), ಮುಕ್ತಾ ಶ್ರೀನಿವಾಸ್ ಮೂಡು ಬೆಟ್ಟು (ವಸ್ತ್ರ ವಿನ್ಯಾಸ ), ಅಶ್ವಿನಿ ಶ್ರೀನಿವಾಸ್ (ಲಲಿತಕಲೆ ), ಸುರೇಖಾ ಭಟ್ (ರಂಗೋಲಿ ), ಮಾಸ್ಟರ್ ಆಶ್ಲೇಷ್ ಆರ್ . ಭಟ್ (ಚಲನಚಿತ್ರ ), ಕುಮಾರಿ ಮಾನ್ಸಿ ಕೆ ಕೋಟ್ಯಾನ್ ಕೊಳ (ನೃತ್ಯ ), ಕುಮಾರಿ ಮಾನ್ಸಿ ಎಸ್.ಎ. ಪುತ್ತೂರು ಅವರನ್ನು ಸನ್ಮಾನಿಸಲಾಗುವುದು. ಸಮಾರಂಭದ ಸಮಾರೋಪ ಭಾಷಣವನ್ನು ಸಾಹಿತಿ ಡಾ. ನಿಕೇತನ ಮಾಡಲಿದ್ದಾರೆ. ಬಳಿಕ ಯಕ್ಷ ರಂಗಾಯಣ ಕಾರ್ಕಳ ಇವರಿಂದ “ಆರೊಡನೆ ಕಾದು ವೇನು” ಎಂಬ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು ಹಾಗೂ ರಂಜಿನಿ ವಸಂತ್, ಸ್ವಾಗತ ಸಮಿತಿಯ ಸಾಧು ಸಾಲ್ಯಾನ್, ಕಾರ್ಯದರ್ಶಿ ಸತೀಶ್ ಕೊಡವೂರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

2 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

2 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

3 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

5 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

6 days ago