ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಒಂದು ಪರೀಕ್ಷೆಯಿಂದ ಯಾರೊಬ್ಬರನ್ನೂ ವ್ಯಾಖ್ಯಾನಿಸಲು ಸಾಧ್ಯವಿಲ್ಲ- ಮೋದಿ

ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಪರೀಕ್ಷೆಗಳ ಫಲಿತಾಂಶ ಇಂದು ಪ್ರಕಟವಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದು, ಒಂದು ಪರೀಕ್ಷೆಯಿಂದ ಯಾರೊಬ್ಬರನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣರಾದ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಅಭಿನಂದನೆಗಳು, ಇದು ನಿಮ್ಮ ದೃಢನಿಶ್ಚಯ. ಶಿಸ್ತು ಮತ್ತು ಕಠಿಣ ಪರಿಶ್ರಮದ ಫಲಿತಾಂಶವಾಗಿದೆ. ಈ ಸಾಧನೆಗೆ ಕಾರಣರಾದ ಪೋಷಕರ ಪಾತ್ರವನ್ನು ಗುರುತಿಸುವ ದಿನ ಇಂದು’ ಎಂದೂ ಹೇಳಿದ್ದಾರೆ.

‘ಕೇವಲ ಒಂದು ಪರೀಕ್ಷೆಯಿಂದ ನಿಮ್ಮನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ. ನಿಮ್ಮ ಪ್ರಯಾಣವು ಬಹಳಷ್ಟಿದೆ ಮತ್ತು ಸಾಮರ್ಥ್ಯಗಳು ಅಂಕಪಟ್ಟಿಯನ್ನು ಮೀರಿವೆ, ಆತ್ಮವಿಶ್ವಾಸದಿಂದಿರಿ. ಏಕೆಂದರೆ ಮುಂದೆ ಅದ್ಭುತ ವಿಷಯಗಳು ನಿಮಗಾಗಿ ಕಾಯುತ್ತಿರಬಹುದು’ ಎಂದು ಪರೀಕ್ಷೆಯಲ್ಲಿ ನಿರಾಶೆಗೊಂಡವರಿಗೆ ಮೋದಿ ಕಿವಿಮಾತು ಹೇಳಿದ್ದಾರೆ.

ಈ ಬಾರಿಯ ಸಿಬಿಎಸ್‌ಐ 12ನೇ ತರಗತಿ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇ 88.39ರಷ್ಟಿದೆ. ಕಳೆದ ಸಾಲಿಗಿಂತ ಫಲಿತಾಂಶದಲ್ಲಿ ಈ ಬಾರಿ ಅಲ್ಪ ಹೆಚ್ಚಳವಾಗಿದೆ. ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ 91.64ರಷ್ಟು, ಬಾಲಕರ ಉತ್ತೀರ್ಣ ಪ್ರಮಾಣ ಶೇ 85,70ರಷ್ಟಿದೆ.
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 133,60ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಶೇ 195.90 ರಷ್ಟು ಫಲಿತಾಂಶ ಪಡೆದು ಬೆಂಗಳೂರು ಮೂರನೇ ಸ್ಥಾನ ಗಳಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!