ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಪರೀಕ್ಷೆಗಳ ಫಲಿತಾಂಶ ಇಂದು ಪ್ರಕಟವಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದು, ಒಂದು ಪರೀಕ್ಷೆಯಿಂದ ಯಾರೊಬ್ಬರನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸಿಬಿಎಸ್‌ಇ ಪರೀಕ್ಷೆಯಲ್ಲಿ ಉತ್ತೀರ್ಣರಾದ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಅಭಿನಂದನೆಗಳು, ಇದು ನಿಮ್ಮ ದೃಢನಿಶ್ಚಯ. ಶಿಸ್ತು ಮತ್ತು ಕಠಿಣ ಪರಿಶ್ರಮದ ಫಲಿತಾಂಶವಾಗಿದೆ. ಈ ಸಾಧನೆಗೆ ಕಾರಣರಾದ ಪೋಷಕರ ಪಾತ್ರವನ್ನು ಗುರುತಿಸುವ ದಿನ ಇಂದು’ ಎಂದೂ ಹೇಳಿದ್ದಾರೆ.
‘ಕೇವಲ ಒಂದು ಪರೀಕ್ಷೆಯಿಂದ ನಿಮ್ಮನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ. ನಿಮ್ಮ ಪ್ರಯಾಣವು ಬಹಳಷ್ಟಿದೆ ಮತ್ತು ಸಾಮರ್ಥ್ಯಗಳು ಅಂಕಪಟ್ಟಿಯನ್ನು ಮೀರಿವೆ, ಆತ್ಮವಿಶ್ವಾಸದಿಂದಿರಿ. ಏಕೆಂದರೆ ಮುಂದೆ ಅದ್ಭುತ ವಿಷಯಗಳು ನಿಮಗಾಗಿ ಕಾಯುತ್ತಿರಬಹುದು’ ಎಂದು ಪರೀಕ್ಷೆಯಲ್ಲಿ ನಿರಾಶೆಗೊಂಡವರಿಗೆ ಮೋದಿ ಕಿವಿಮಾತು ಹೇಳಿದ್ದಾರೆ.
ಈ ಬಾರಿಯ ಸಿಬಿಎಸ್‌ಐ 12ನೇ ತರಗತಿ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಶೇ 88.39ರಷ್ಟಿದೆ. ಕಳೆದ ಸಾಲಿಗಿಂತ ಫಲಿತಾಂಶದಲ್ಲಿ ಈ ಬಾರಿ ಅಲ್ಪ ಹೆಚ್ಚಳವಾಗಿದೆ. ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ 91.64ರಷ್ಟು, ಬಾಲಕರ ಉತ್ತೀರ್ಣ ಪ್ರಮಾಣ ಶೇ 85,70ರಷ್ಟಿದೆ.
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 133,60ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಶೇ 195.90 ರಷ್ಟು ಫಲಿತಾಂಶ ಪಡೆದು ಬೆಂಗಳೂರು ಮೂರನೇ ಸ್ಥಾನ ಗಳಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…