ಮೂಲ್ಕಿ: ಮನೆಯ ಹಿಂದಿನ ಚರಂಡಿಯ ಗುಂಡಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ.
ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬುವವರ ಮನೆಯ ಹಿಂಭಾಗದ ಡ್ರೇನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಮಹಿಳೆ ಕಳೆದ 4 ತಿಂಗಳಿಂದ ಮೃತ ಮಹಿಳೆ ನಾಗಮ್ಮ ಕಲ್ಲಾಪುವಿನಿಂದ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮನೆ ಮಾಲಕ ಪುಷ್ಪರಾಜ್ ಅಮೀನ್ ಅವರು ಮುಂಬೈನಲ್ಲಿ ವಾಸವಾಗಿದ್ದು, ಇದೀಗ ಮನೆಗೆ ಬಂದ ವೇಳೆ ಮನೆ ಹಿಂಬದಿಯ ಪಿಟ್ ನಲ್ಲಿ ಶವ ಇರುವುದನ್ನು ಗಮನಿಸಿ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಡ್ರೇನೇಜ್ ಪಿಟ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.
ಗುಂಡಿಯ ಮೇಲೆ ಲೋಹದ ಶೀಟ್ ಹಾಕಲಾಗಿದ್ದು, ಗುಂಡಿಯೊಳಗೆ ಕಾಲು ಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದ್ದು, ಚಿಕ್ಕ ಚರಂಡಿಯ ಗುಂಡಿಯೊಳಗೆ ಮಹಿಳೆ ಬಿದ್ದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಿಖರಕಾರಣ ತಿಳಿದುಬರಬೇಕಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…