ಜನ ಮನದ ನಾಡಿ ಮಿಡಿತ

Advertisement

ಪಟ್ನಾ: ಹುತಾತ್ಮರಾದ ಬಿಎಸ್‌ಎಫ್ ಯೋಧ ರಾಮ್ ಬಾಬು ಸಿಂಗ್‌ಗೆ 250 ಲಕ್ಷ ಪರಿಹಾರ – ಬಿಹಾರ್ ಸಿಎಂ

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಪಡೆಗಳ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಬಿಎಸ್‌ಎಫ್ ಯೋಧ ರಾಮ್ ಬಾಬು ಸಿಂಗ್‌ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಸಂತಾಪ ಸೂಚಿಸಿದ್ದಾರೆ.

ಸಿವಾನ್ ಜಿಲ್ಲೆಯ ನಿವಾಸಿ ಸಿಂಗ್ ಅವರ ಕುಟುಂಬಕ್ಕೆ ನಿತೀಶ್ 250 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಸಿಂಗ್ ಅವರ ಅಂತಿಮ ವಿಧಿಗಳನ್ನು ಅವರ ಪೂರ್ವಜರ ಗ್ರಾಮದಲ್ಲಿ ಸಕರ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ಸಿಂಗ್ ಅವರು ಕೆಲವು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ಯೋಧನ ಸಾವಿಗೆ ಸ್ಥಳೀಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದರು.
ಮೇ 9ರಂದು ಅವರು ಗಾಯಗೊಂಡಿದ್ದರು. ಸಿಂಗ್ ಅವರ ಪಾರ್ಥೀವ ಶರೀರ ಇಂದು ರಾತ್ರಿ ಹೊತ್ತಿಗೆ ರಾಜ್ಯಕ್ಕೆ ತಲುಪುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏಪ್ರಿಲ್ 23ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಟಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ‘ಆಪರೇಷನ್ ಸಿಂಧೂರ’ ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.

ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್‌ಗೆ ಮತ್ತೊಮ್ಮೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್, ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!