ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಪಡೆಗಳ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಬಿಎಸ್‌ಎಫ್ ಯೋಧ ರಾಮ್ ಬಾಬು ಸಿಂಗ್‌ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಸಂತಾಪ ಸೂಚಿಸಿದ್ದಾರೆ.
ಸಿವಾನ್ ಜಿಲ್ಲೆಯ ನಿವಾಸಿ ಸಿಂಗ್ ಅವರ ಕುಟುಂಬಕ್ಕೆ ನಿತೀಶ್ 250 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಸಿಂಗ್ ಅವರ ಅಂತಿಮ ವಿಧಿಗಳನ್ನು ಅವರ ಪೂರ್ವಜರ ಗ್ರಾಮದಲ್ಲಿ ಸಕರ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ಸಿಂಗ್ ಅವರು ಕೆಲವು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ಯೋಧನ ಸಾವಿಗೆ ಸ್ಥಳೀಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದರು.
ಮೇ 9ರಂದು ಅವರು ಗಾಯಗೊಂಡಿದ್ದರು. ಸಿಂಗ್ ಅವರ ಪಾರ್ಥೀವ ಶರೀರ ಇಂದು ರಾತ್ರಿ ಹೊತ್ತಿಗೆ ರಾಜ್ಯಕ್ಕೆ ತಲುಪುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏಪ್ರಿಲ್ 23ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಟಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ‘ಆಪರೇಷನ್ ಸಿಂಧೂರ’ ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.
ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್‌ಗೆ ಮತ್ತೊಮ್ಮೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್, ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…