ಜೂನ್ 11 ರಿಂದ ಲಾರ್ಡ್ಸ್‌ನಲ್ಲಿ ಆಸ್ಟ್ರೇಲಿಯ – ದಕ್ಷಿಣ ಆಫ್ರಿಕಾ ನಡುವೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಆರಂಭವಾಗಲಿದೆ. ಫೈನಲ್ ಪಂದ್ಯಕ್ಕೆ ಈಗಾಗಲೇ ಉಭಯ ತಂಡಗಳ ಪ್ರಕಟವೂ ಆಗಿದೆ. ಇದೀಗ ಐಪಿಎಲ್‌ನಲ್ಲಿ ಆಡುತ್ತಿರುವ ಎಂಟು ದಕ್ಷಿಣ ಆಫ್ರಿಕಾದ ಆಟಗಾರರು ಪ್ಲೇ ಆಫ್ ಪಂದ್ಯಕ್ಕೂ ಮುನ್ನ ಐಪಿಎಲ್ ತೊರೆಯಲಿದ್ದಾರೆ ಎಂದು ತಿಳಿದುಬಂದಿದೆ.
ಫೈನಲ್ ಪಂದ್ಯಕ್ಕೆ ಆಯ್ಕೆಯಾದ ಆಟಗಾರರು ಮೇ 25 ರ ಒಳಗೆ ರಾಷ್ಟ್ರೀಯ ತಂಡದ ಕರ್ತವ್ಯಕ್ಕೆ ಹಾಜರಾಗಬೇಕೆಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಆಟಗಾರರಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.ಇನ್ನೊಂದೆಡೆ ಕ್ರಿಕೆಟ್ ಆಸ್ಟ್ರೇಲಿಯಾ ಐಪಿಎಲ್‌ಗೆ ಮರಳುವ ಆಯ್ಕೆಯನ್ನು ಆಟಗಾರರಿಗೆ ಬಿಟ್ಟದ್ದು ಎಂದಿದೆ. ಆಟಗಾರರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರಲು ನಾವು ಸಿದ್ಧ ಎಂದಿದೆ. ಹೀಗಾಗಿ ಕೆಲ ಆಸೀಸ್ ಆಟಗಾರರು ಮತ್ತೆ ಐಪಿಎಲ್ ಆಡುವುದು ಅನುಮಾನ.
ವಿಶ್ವ ಟೆಸ್ಟ್ ಫೈನಲ್ ಆಡಲಿರುವ ಕಗಿಸೊ ರಬಾಡ , ಲುಂಗಿ ಎನ್‌ಗಿಡಿ , ಟ್ರಿಸ್ಟಾನ್ ಸ್ಟಬ್ಸ್, ಐಡೆನ್ ಮಾರ್ಕ್ರಾಮ್, ರಯಾನ್ ರಿಕಲ್ಟನ್, ಕಾರ್ಬಿನ್ ಬಾಷ್, ಮಾರ್ಕೊ ಜಾನ್ಸೆನ್ ಮತ್ತು ವಿಯಾನ್ ಮುಲ್ಡರ್ ಮೇ 30 ರಂದು ತಂಡದ ಉಳಿದ ಆಟಗಾರರೊಂದಿಗೆ ಲಂಡನ್‌ಗೆ ಹೊರಡುವ ಮೊದಲು ದಕ್ಷಿಣ ಆಫ್ರಿಕಾಕ್ಕೆ ಮರಳಬೇಕಿದೆ. ಹೀಗಾಗಿ ಇವರೆಲ್ಲ ಪ್ಲೇ ಆಫ್‌ಗೂ ಮುನ್ನ ಐಪಿಎಲ್ ತಂಡಗಳಿಗೆ ಕೈಕೊಡಲಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…