ಜನ ಮನದ ನಾಡಿ ಮಿಡಿತ

Advertisement

ಉಡುಪಿಯ ಶಿರ್ವದಲ್ಲಿ ದೈತ್ಯ ಕಾಡುಕೋಣ ಪತ್ತೆ

ಉಡುಪಿ: ದೈತ್ಯ ಗಾತ್ರದ ಕಾಡುಕೋಣವೊಂದು ಉಡುಪಿ ಜಿಲ್ಲೆಯ ಶಿರ್ವದ ಪಿಲಾರು ಕಾಡಿನ ಬಳಿ ಕಂಡುಬಂದಿದೆ. ದೈತ್ಯ ಗಾತ್ರದ ಈ ಕಾಡುಕೋಣವನ್ನು ಕಂಡು ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ. ಆಹಾರ ಅರಸಿಕೊಂಡು ನಾಡಿಗೆ ಬಂದಿರುವ ಈ ಕಾಡುಕೋಣವನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರ ಮುತುವರ್ಜಿಯಲ್ಲಿ ಮತ್ತೆ ಕಾಡಿಗೆ ಕಳುಹಿಸಿ ಕೊಡಲಾಯಿತು. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್, ಧೀರಜ್ ಮತ್ತು ಸಂಗಡಿಗರು ಕಾಡುಕೋಣವನ್ನು ಮರಳಿ ಕಾಡಿಗೆ ಕಳುಹಿಸಿಕೊಡುವಲ್ಲಿ ಶ್ರಮಿಸಿದರು. ಹುಲಿ, ಚಿರತೆ, ಆನೆ, ಕಾಡುಕೋಣ ಮುಂತಾದ ಅನೇಕ ಕಾಡುಪ್ರಾಣಿಗಳು ಇತ್ತೀಚೆಗೆ ನಾಡಿನತ್ತ ಆಗಮಿಸುತ್ತಿರುವುದು ಹೆಚ್ಚುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆ ವಹಿಸಿ ಕಾರ್ಯಾಚರಿಸಬೇಕೆಂದು ಗ್ರಾಮಸ್ಥರು ಅಭಿಪ್ರಾಯ ಪಟ್ಟಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!