ಜನ ಮನದ ನಾಡಿ ಮಿಡಿತ

Advertisement

ಹೈದರಾಬಾದ್: ಕೊಕೇನ್ ಸೇವನೆಗಾಗಿ 1 ಕೋಟಿ ಮೌಲ್ಯದ ಆಸ್ತಿ ಮಾರಿದ ಪ್ರತಿಷ್ಠಿತ ಆಸ್ಪತ್ರೆಯ ಮಾಜಿ ಸಿಇಒ

ಮಾದಕ ವಸ್ತುವಾದ ಕೊಕೇನ್ ಸೇವನೆಗಾಗಿ ಹೈದರಾಬಾದ್‌ನ ಒಮೆಗಾ ಆಸ್ಪತ್ರೆಯ ಮಾಜಿ ಮಹಿಳಾ ಸಿಇಒ ಬರೋಬ್ಬರಿ 1 ಕೋಟಿ ರೂಪಾಯಿ ಆಸ್ತಿ ಮಾರಾಟ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಹೈದರಾಬಾದ್‌ನ ಪ್ರತಿಷ್ಠಿತ ಒಮೆಗಾ ಆಸ್ಪತ್ರೆಗಳ ಮಾಜಿ ಸಿಇಒ ಡಾ. ನಮ್ರತಾ ಚಿಗುರುಪತಿ (34) ಅವರನ್ನು ಸದ್ಯ ತೆಲಂಗಾಣ ಮಾದಕ ದ್ರವ್ಯ ವಿರೋಧಿ ಬ್ಯೂರೋ ಬಂಧಿಸಿದ್ದಾರೆ. ಜೊತೆಗೆ ಕೊಕೇನ್ ಸರಬರಾಜುದಾರ ವಂಶ್ ಧಕ್ಕರ್‌ನನ್ನು ಅರೆಸ್ಟ್ ಮಾಡಲಾಗಿದೆ. ಕೊಕೇನ್ ಸರಬರಾಜುದಾರ ಮಾಡುವ ಕಿಂಗ್ ಪಿನ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಡಾ. ನಮ್ರತಾ ಚಿಗುರುಪತಿ ಅವರು ಸ್ಪೇನ್‌ನಲ್ಲಿ 2021, 2022ರಲ್ಲಿ ಎಂಬಿಎ ವ್ಯಾಸಂಗ ಮಾಡುವಾಗ ಮಾದಕ ವ್ಯಸನಕ್ಕೆ ಒಳಗಾಗಿದ್ದರು. ಅಂದಿನಿAದ ಕೊಕೇನ್ ತೆಗೆದುಕೊಳ್ಳುತ್ತಿದ್ದರು.

ಹೀಗಾಗಿ ಕಳೆದ ವಾರ ತನ್ನ ಕಾರಿನಲ್ಲಿ 5 ಲಕ್ಷ ರೂಪಾಯಿ ಮೌಲ್ಯದ ಕೊಕೇನ್ ಖರೀದಿ ಮಾಡುವಾಗ ಪೊಲೀಸರು ಅರೆಸ್ಟ್ ಮಾಡಿದ್ದರು. ಇಲ್ಲೊಂದು ಸಂಗತಿ ಎಂದರೆ ಕೊಕೇನ್ ಅನ್ನು ವಾಟ್ಸ್ಅಪ್ ಮೂಲಕ ಆರ್ಡರ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮಾದಕ ವಸ್ತುವಿಗೆ ಒಳಗಾದ ಮೇಲೆ ಡಾ. ನಮ್ರತಾ ಅವರು ಸುಮಾರು 1 ಕೋಟಿ ಮೌಲ್ಯದ ತನ್ನ ಆಸ್ತಿಯನ್ನು ಮಾರಾಟ ಮಾಡಿದ್ದರು. ಇದೇ ಹಣದಿಂದ ಕೊಕೇನ್ ಅನ್ನು ವಾಟ್ಸ್ಅಪ್ ಮೂಲಕ ಆರ್ಡರ್ ಮಾಡುತ್ತಿದ್ದರು. ಒಂದು ದಿನದಲ್ಲಿ ಸುಮಾರು 10 ಬಾರಿ ಕೊಕೇನ್ ಸೇವನೆ ಮಾಡುತ್ತಿದ್ದರು ಎಂದು ವಿಚಾರಣೆಯಿಂದ ತಿಳಿದು ಬಂದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!