ಮಾದಕ ವಸ್ತುವಾದ ಕೊಕೇನ್ ಸೇವನೆಗಾಗಿ ಹೈದರಾಬಾದ್‌ನ ಒಮೆಗಾ ಆಸ್ಪತ್ರೆಯ ಮಾಜಿ ಮಹಿಳಾ ಸಿಇಒ ಬರೋಬ್ಬರಿ 1 ಕೋಟಿ ರೂಪಾಯಿ ಆಸ್ತಿ ಮಾರಾಟ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಹೈದರಾಬಾದ್‌ನ ಪ್ರತಿಷ್ಠಿತ ಒಮೆಗಾ ಆಸ್ಪತ್ರೆಗಳ ಮಾಜಿ ಸಿಇಒ ಡಾ. ನಮ್ರತಾ ಚಿಗುರುಪತಿ (34) ಅವರನ್ನು ಸದ್ಯ ತೆಲಂಗಾಣ ಮಾದಕ ದ್ರವ್ಯ ವಿರೋಧಿ ಬ್ಯೂರೋ ಬಂಧಿಸಿದ್ದಾರೆ. ಜೊತೆಗೆ ಕೊಕೇನ್ ಸರಬರಾಜುದಾರ ವಂಶ್ ಧಕ್ಕರ್‌ನನ್ನು ಅರೆಸ್ಟ್ ಮಾಡಲಾಗಿದೆ. ಕೊಕೇನ್ ಸರಬರಾಜುದಾರ ಮಾಡುವ ಕಿಂಗ್ ಪಿನ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಡಾ. ನಮ್ರತಾ ಚಿಗುರುಪತಿ ಅವರು ಸ್ಪೇನ್‌ನಲ್ಲಿ 2021, 2022ರಲ್ಲಿ ಎಂಬಿಎ ವ್ಯಾಸಂಗ ಮಾಡುವಾಗ ಮಾದಕ ವ್ಯಸನಕ್ಕೆ ಒಳಗಾಗಿದ್ದರು. ಅಂದಿನಿAದ ಕೊಕೇನ್ ತೆಗೆದುಕೊಳ್ಳುತ್ತಿದ್ದರು.
ಹೀಗಾಗಿ ಕಳೆದ ವಾರ ತನ್ನ ಕಾರಿನಲ್ಲಿ 5 ಲಕ್ಷ ರೂಪಾಯಿ ಮೌಲ್ಯದ ಕೊಕೇನ್ ಖರೀದಿ ಮಾಡುವಾಗ ಪೊಲೀಸರು ಅರೆಸ್ಟ್ ಮಾಡಿದ್ದರು. ಇಲ್ಲೊಂದು ಸಂಗತಿ ಎಂದರೆ ಕೊಕೇನ್ ಅನ್ನು ವಾಟ್ಸ್ಅಪ್ ಮೂಲಕ ಆರ್ಡರ್ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮಾದಕ ವಸ್ತುವಿಗೆ ಒಳಗಾದ ಮೇಲೆ ಡಾ. ನಮ್ರತಾ ಅವರು ಸುಮಾರು 1 ಕೋಟಿ ಮೌಲ್ಯದ ತನ್ನ ಆಸ್ತಿಯನ್ನು ಮಾರಾಟ ಮಾಡಿದ್ದರು. ಇದೇ ಹಣದಿಂದ ಕೊಕೇನ್ ಅನ್ನು ವಾಟ್ಸ್ಅಪ್ ಮೂಲಕ ಆರ್ಡರ್ ಮಾಡುತ್ತಿದ್ದರು. ಒಂದು ದಿನದಲ್ಲಿ ಸುಮಾರು 10 ಬಾರಿ ಕೊಕೇನ್ ಸೇವನೆ ಮಾಡುತ್ತಿದ್ದರು ಎಂದು ವಿಚಾರಣೆಯಿಂದ ತಿಳಿದು ಬಂದಿದೆ ಎನ್ನಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…