ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಕನ್ನಡಿಗರ ಭಾವನೆಗೆ ಧಕ್ಕೆ ತಂದಿದ್ದ ಗಾಯಕ ಸೋನು ನಿಗಮ್ ಅರ್ಜಿಯನ್ನು ಮುಂದೂಡಿದ ಹೈಕೋರ್ಟ್

ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ಭಾರೀ ಆಕ್ರೊಶ ವ್ಯಕ್ತವಾಗಿತ್ತು. ಈ ಬಗ್ಗೆ ನಗರದ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಸದ್ಯ ಈ ಪ್ರಕರಣದ ರದ್ದು ಕೋರಿ ಸೋನು ನಿಗಮ್ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಆದರೆ ಗಾಯಕ ಸಲ್ಲಿಕೆ ಮಾಡಿದ ಅರ್ಜಿ ವಿಚಾರಣೆಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಮೇ.15 ಅಂದರೆ ನಾಳೆಗೆ ಮುಂದೂಡಿದೆ. ಇನ್ನು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದ್ರಿಂದ ಅವಲಹಳ್ಳಿ ಪೊಲೀಸರು ಸೋನು ನಿಗಮ್‌ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇನ್ನು ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮದಲ್ಲಿ ಸೋನು ನಿಗಮ್ ಅವರು ಭಾಗಿಯಾಗಿದ್ದಾಗ, ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಮನವಿ ಮಾಡಿದ್ದಾನೆ.

ಆಗ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿದ್ದಾರೆ. ಅಲ್ಲದೇ ಮಾತಾಡುವ ಬರದಲ್ಲಿ ಪಹಲ್ಗಾಮ್ ದಾಳಿಯನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಇದೆಲ್ಲಾ ಆದ ಮೇಲೆ ತಮ್ಮ ಹೇಳಿಕೆಯನ್ನು ಸೋನು ನಿಗಮ್ ಅವರು ಸಮರ್ಥನೆ ಮಾಡಿಕೊಂಡಿದ್ದರು. ವಿಡಿಯೋ ಮೂಲಕ ಮಾತನಾಡಿದ್ದ ಸೋನು ನಿಗಮ್ ನಾನು ಕನ್ನಡಿಗರ ವಿರುದ್ಧ ಮಾತನಾಡಿಲ್ಲ. ಅಲ್ಲಿದ್ದ ಕೆಲ ಪುಂಡರ ಕುರಿತು ಮಾತನಾಡಿದ್ದೇ. ದಯವಿಟ್ಟು ಅದನ್ನು ದೊಡ್ಡದು ಮಾಡಬೇಡಿ. ಇಲ್ಲಿಗೆ ಬಿಡಿ ಎಂದು ಕೇಳಿದ್ದರು. ಆದರೆ ಇದಕ್ಕೂ ಕನ್ನಡಿಗರೂ ಆಕ್ರೋಶ ವ್ಯಕ್ತಪಡಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!