ಕನ್ನಡಿಗರ ಭಾವನೆಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದ್ದ ಬಾಲಿವುಡ್ ಗಾಯಕ ಸೋನು ನಿಗಮ್ ವಿರುದ್ಧ ಭಾರೀ ಆಕ್ರೊಶ ವ್ಯಕ್ತವಾಗಿತ್ತು. ಈ ಬಗ್ಗೆ ನಗರದ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಸದ್ಯ ಈ ಪ್ರಕರಣದ ರದ್ದು ಕೋರಿ ಸೋನು ನಿಗಮ್ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಆದರೆ ಗಾಯಕ ಸಲ್ಲಿಕೆ ಮಾಡಿದ ಅರ್ಜಿ ವಿಚಾರಣೆಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಮೇ.15 ಅಂದರೆ ನಾಳೆಗೆ ಮುಂದೂಡಿದೆ. ಇನ್ನು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದ್ರಿಂದ ಅವಲಹಳ್ಳಿ ಪೊಲೀಸರು ಸೋನು ನಿಗಮ್‌ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇನ್ನು ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮದಲ್ಲಿ ಸೋನು ನಿಗಮ್ ಅವರು ಭಾಗಿಯಾಗಿದ್ದಾಗ, ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಮನವಿ ಮಾಡಿದ್ದಾನೆ.
ಆಗ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿದ್ದಾರೆ. ಅಲ್ಲದೇ ಮಾತಾಡುವ ಬರದಲ್ಲಿ ಪಹಲ್ಗಾಮ್ ದಾಳಿಯನ್ನು ಕರ್ನಾಟಕಕ್ಕೆ ಹೋಲಿಕೆ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಇದೆಲ್ಲಾ ಆದ ಮೇಲೆ ತಮ್ಮ ಹೇಳಿಕೆಯನ್ನು ಸೋನು ನಿಗಮ್ ಅವರು ಸಮರ್ಥನೆ ಮಾಡಿಕೊಂಡಿದ್ದರು. ವಿಡಿಯೋ ಮೂಲಕ ಮಾತನಾಡಿದ್ದ ಸೋನು ನಿಗಮ್ ನಾನು ಕನ್ನಡಿಗರ ವಿರುದ್ಧ ಮಾತನಾಡಿಲ್ಲ. ಅಲ್ಲಿದ್ದ ಕೆಲ ಪುಂಡರ ಕುರಿತು ಮಾತನಾಡಿದ್ದೇ. ದಯವಿಟ್ಟು ಅದನ್ನು ದೊಡ್ಡದು ಮಾಡಬೇಡಿ. ಇಲ್ಲಿಗೆ ಬಿಡಿ ಎಂದು ಕೇಳಿದ್ದರು. ಆದರೆ ಇದಕ್ಕೂ ಕನ್ನಡಿಗರೂ ಆಕ್ರೋಶ ವ್ಯಕ್ತಪಡಿಸಿದ್ದರು.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…