‘ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸಂದರ್ಭದಲ್ಲಿ ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅವರು ಮೇ 15ರಂದು ನಾನು ಬೆಂಗಳೂರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಸದ್ಯದ ಪರಿಸ್ಥಿತಿ ಅರ್ಥ ಮಾಡಿಕೊಂಡು ಸಹಕರಿಸುವಂತೆ ಅಭಿಮಾನಿಗಳು ಮತ್ತು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಜನ್ಮದಿನದ ಶುಭ ಕೋರುವ ಪ್ಲೆಕ್ಸ್, ಬ್ಯಾನರ್‌ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ವಿನಂತಿ ಮಾಡಿದ್ದಾರೆ.ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ. ನೀವು ಇರುವ ಜಾಗದಿಂದಲೇ ನನಗೆ ಶುಭ ಹಾರೈಸಿ ಆಶಿರ್ವದಿಸಿ ಎಂದು ಡಿ.ಕೆ. ಶಿವಕುಮಾರ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…