ತಂದೆಯ ಮೇಲಿನ ದ್ವೇಷಕ್ಕೆ ಮಕ್ಕಳ ಮೇಲೆ ಕಾರು ಹರಿಸಿ ಕೊಲ್ಲಲು ಯತ್ನಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೊದಲ್ಲಿ ನಡೆದಿದೆ. ಈ ಕುರಿತ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮೂವರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮಕ್ಕಳನ್ನು ಶಿವಾನಿ. ಸ್ನೇಹಾ, ಕೃಷ್ಣ ಎಂದು ಗುರುತಿಸಲಾಗಿದೆ. ಕಾರು ಹತ್ತಿಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಗೋವಿಂದ ಯಾದವ್ ನನ್ನು ಸ್ಥಳೀಯರು ಬೆನ್ನಟ್ಟಿ ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಮಕ್ಕಳ ತಂದೆ ವೀರೇಂದ್ರ ಅಲಿಯಾಸ್ ಸೀತಾರಾಮ್ ಜೊತೆಗೆ ವೈಯಕ್ತಿಕ ದ್ವೇಷವಿದ್ದುದರಿಂದ, ಆರೋಪಿಯು ಈ ಕೃತ್ಯ ಎಸಗಿದ್ದಾನೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…