ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ – ಗುಂಡೂರಾವ್

ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ.

ನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ ಎಂದು ಹೇಳಿದ್ದಾರೆ. 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.

ಮುಂದುವರೆಸಿ ಮಾತನಾಡಿದ ಅವರು 30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನಲೆ ಕೊಂಚ ಲೇಟ್ ಆಗಿದೆ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ ಎಸ್​​ಎನ್​​ಸಿಯು ಮತ್ತು ಐಸಿಯುದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್​ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!