ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಸಂಪೂರ್ಣ ಸರ್ವಿಸ್ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಗರದ ಶೇಷಾದ್ರೀಪುರಂ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ ಎಂದು ಹೇಳಿದ್ದಾರೆ. 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.
ಮುಂದುವರೆಸಿ ಮಾತನಾಡಿದ ಅವರು 30 ಸಾವಿರ ಸಿಬ್ಬಂದಿ ವೇತನವಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, 2023-24 ರಲ್ಲಿ ಓಪನಿಂಗ್ ಬ್ಯಾಲೆನ್ಸ್ ಹೆಚ್ಚು ಇರ್ತಾ ಇತ್ತು. ಆದರೆ ಕಳೆದ ಸರ್ಕಾರದಿಂದ ಓಪನಿಂಗ್ ಬ್ಯಾಲೆನ್ ಕಡಿಮೆಯಾಗಿದೆ. ಹೀಗಾಗಿ ನಾವು ರಾಜ್ಯ ಸರ್ಕಾರದಿಂದ ಕೊಡಲು ಆಗುತ್ತಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನಲೆ ಕೊಂಚ ಲೇಟ್ ಆಗಿದೆ. ಇನ್ನೇರಡು ಮೂರು ದಿನಗಳಲ್ಲಿ ವೇತನ ಆಗಬಹುದು. ನಾವು ಯಾವುದೇ ವೇತನ ತಡೆ ಹಿಡದಿಲ್ಲ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ ಎಸ್ಎನ್ಸಿಯು ಮತ್ತು ಐಸಿಯುದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…