ಜನ ಮನದ ನಾಡಿ ಮಿಡಿತ

Advertisement

ಹಾಸನ : ಸಿಎಂ ಕಾರಿಗೆ ಮೊಟ್ಟೆ ಎಸೆದಿದ್ದ ಆರೋಪಿಯ ಶವ ಪ್ರಪಾತದಲ್ಲಿ ಪತ್ತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ಭೇಟಿ ನೀಡಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಪತ್ ಮೃತದೇಹ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ಪತ್ತೆಯಾಗಿದೆ. ಇನ್ನು, ಸಂಪತ್​ ಅವರು ಕಾರು ಸಂಪೂರ್ಣ ರಕ್ತಸಿಕ್ತವಾಗಿದೆ. ಮೇಲ್ನೋಟಕ್ಕೆ ಯಾರೋ ಸಂಪತ್​ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ, ಬಳಿಕ ಅವರದ್ದೇ ಕಾರಿನಲ್ಲಿ ಶವ ತಂದು ಬಿಸಾಡಿದ್ದಾರೆ ಎಂಬುವುದು ತಿಳಿದುಬಂದಿದೆ.

ಸಂಪತ್​ ಅವರು ಏಪ್ರಿಲ್ 9 ರಂದು ಕುಶಾಲನಗರದಿಂದ ತಮ್ಮ ಸ್ನೇಹಿತನ ಕಾರು ತೆಗೆದುಕೊಂಡು ಹಾಸನಕ್ಕೆ ಬಂದಿದ್ದರು. ಏಪ್ರಿಲ್ 10 ರಂದು ಕಲ್ಲಹಳ್ಳಿ ಗ್ರಾಮದ ಬಳಿ ಕಾರು ಪತ್ತೆಯಾಗಿತ್ತು. ಕಾರಿನಲ್ಲಿ ರಕ್ತ ಹರಿದಿರುವುದನ್ನು ಗಮನಿಸಿದ್ದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಯಸಳೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಅತ್ತ, ಕುಶಾಲನಗರ ಪೊಲೀಸ್​ ಠಾಣೆಯಲ್ಲಿ ಸಂಪತ್ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು.

2022ರಲ್ಲಿ ಅಪಾರ ಮಳೆಯಾಗಿ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ ಅಪಾರ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಪ್ರವಾಹದಿಂದ ಹಾನಿಯಾಗಿದ್ದ ಪ್ರದೇಶಗಳ ವೀಕ್ಷಣೆಗೆಂದು 2022ರ ಆಗಸ್ಟ್​ 18 ರಂದು ತೆರಳಿದ್ದರು. ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬರುತ್ತಿದ್ದರು.

ದಾರಿ ಮಧ್ಯೆ ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಎದುರು ಕಪ್ಪು ಬಾವುಟ ತೋರಿಸಿ ಗೋ ಬ್ಯಾಕ್​ ಸಿದ್ದರಾಮಯ್ಯ ಅಂತ ಘೋಷಣೆ ಕೂಗಿದ್ದರು. ಇದೇ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಸಿದ್ದರಾಮಯ್ಯ ಅವರು ವೀರ್ ಸಾವರ್ಕರ್​ ಅವರ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!