ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ಭೇಟಿ ನೀಡಿದ್ದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸಂಪತ್ ಮೃತದೇಹ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ಪತ್ತೆಯಾಗಿದೆ. ಇನ್ನು, ಸಂಪತ್ ಅವರು ಕಾರು ಸಂಪೂರ್ಣ ರಕ್ತಸಿಕ್ತವಾಗಿದೆ. ಮೇಲ್ನೋಟಕ್ಕೆ ಯಾರೋ ಸಂಪತ್ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ, ಬಳಿಕ ಅವರದ್ದೇ ಕಾರಿನಲ್ಲಿ ಶವ ತಂದು ಬಿಸಾಡಿದ್ದಾರೆ ಎಂಬುವುದು ತಿಳಿದುಬಂದಿದೆ.
ಸಂಪತ್ ಅವರು ಏಪ್ರಿಲ್ 9 ರಂದು ಕುಶಾಲನಗರದಿಂದ ತಮ್ಮ ಸ್ನೇಹಿತನ ಕಾರು ತೆಗೆದುಕೊಂಡು ಹಾಸನಕ್ಕೆ ಬಂದಿದ್ದರು. ಏಪ್ರಿಲ್ 10 ರಂದು ಕಲ್ಲಹಳ್ಳಿ ಗ್ರಾಮದ ಬಳಿ ಕಾರು ಪತ್ತೆಯಾಗಿತ್ತು. ಕಾರಿನಲ್ಲಿ ರಕ್ತ ಹರಿದಿರುವುದನ್ನು ಗಮನಿಸಿದ್ದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಯಸಳೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಅತ್ತ, ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಸಂಪತ್ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು.
2022ರಲ್ಲಿ ಅಪಾರ ಮಳೆಯಾಗಿ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ ಅಪಾರ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಪ್ರವಾಹದಿಂದ ಹಾನಿಯಾಗಿದ್ದ ಪ್ರದೇಶಗಳ ವೀಕ್ಷಣೆಗೆಂದು 2022ರ ಆಗಸ್ಟ್ 18 ರಂದು ತೆರಳಿದ್ದರು. ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬರುತ್ತಿದ್ದರು.
ದಾರಿ ಮಧ್ಯೆ ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಎದುರು ಕಪ್ಪು ಬಾವುಟ ತೋರಿಸಿ ಗೋ ಬ್ಯಾಕ್ ಸಿದ್ದರಾಮಯ್ಯ ಅಂತ ಘೋಷಣೆ ಕೂಗಿದ್ದರು. ಇದೇ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಸಿದ್ದರಾಮಯ್ಯ ಅವರು ವೀರ್ ಸಾವರ್ಕರ್ ಅವರ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು.

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…