ದ್ವಿಚಕ್ರದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಲಿಖಿತ್ ರಜೆಯಲ್ಲಿ ಸ್ಟೇಜ್ ಡೆಕೋರೇಷನ್ ಕೆಲಸಕ್ಕೆ ಹೋಗುತ್ತಿದ್ದ ಎಂದು ಹೇಳಲಾಗಿದೆ. ಬಿ.ಸಿ.ರೋಡಿನಿಂದ ಮನೆ ಕಡೆಗೆ ಸಂಚಾರ ಮಾಡುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈತ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರು ಟ್ರಾಫಿಕ್ ಪೋಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



