ಮುಸ್ಲಿಮರ ಜತೆ ವ್ಯಾಪಾರ ವಹಿವಾಟು ನಡೆಸಬೇಡಿ, ಮುಸ್ಲಿಂ ವ್ಯಾಪಾರಿಗಳನ್ನು ಬಹಿಷ್ಕರಿಸಬೇಕು ಎಂದು ಭಾಷಣ ಮಾಡಿದ್ದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆಗೆ ಸಂಕಷ್ಟ ಎದುರಾಗಿದೆ.

ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪದಡಿ ಭಾರತಿ ಶೆಟ್ಟಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ನುಡಿನಮನ ಕಾರ್ಯಕ್ರಮ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಮೇ.12ರಂದು ನಡೆದಿತ್ತು.

ಈ ವೇಳೆ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಮುಸ್ಲಿಮರ ವಿರುದ್ಧ ಹೇಳಿಕೆಯನ್ನು ನೀಡಿದ್ದಾರೆ. ಮುಸ್ಲಿಂ ವ್ಯಾಪಾರಿಗಳು, ಮುಸ್ಲಿಂ ಆಟೋ ಚಾಲಕರನ್ನು ಬಹಿಷ್ಕರಿಸಿ ಎಂದಿದ್ರು.

ಈ ಬಗ್ಗೆ ಹರಿಪ್ರಸಾದ್ ಇರ್ವತ್ರಾಯ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ರು. ಈ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ.



