ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬ0ಧಿಸಿದ0ತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಳವಾರು ಗ್ರಾಮದ ಅಝರುದ್ದೀನ್ ಯಾನೆ ಅಝರ್ ಯಾನೆ ಅಜ್ಜು , ಬಜ್ಪೆಯಲ್ಲಿ ವಾಸವಾಗಿರುವ ಅಬ್ದುಲ್ ಖಾದರ್ ಯಾನೆ ನೌಫಲ್, ಮೂಲತಃ ಫರಂಗಿಪೇಟೆ ಕುಂಪನಮಜಲಿನ ಪ್ರಸಕ್ತ ಹಾಸನ ಜಿಲ್ಲೆ ಕೆ.ಆರ್.ಪುರಂ ನಿವಾಸಿ ನೌಷಾದ್ ಯಾನೆ ವಾಮಂಜೂರು ನೌಷಾದ್ ಎಂದು ಗುರುತಿಸಲಾಗಿದೆ.
ಆರೋಪಿಗಳ ಪೈಕಿ ಅಝರುದ್ದೀನ್ ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿದೆ. ಈತನು ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಅಬ್ದುಲ್ ಖಾದರ್ ಎಂಬಾತನು ಆರೋಪಿಗಳು ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ವೇಳೆ ಆರೋಪಿಗಳಿಗೆ ಸಹಕರಿಸಿದ್ದ. ಇನ್ನೋರ್ವ ಆರೋಪಿ ನೌಷಾದ್ ಎಂಬಾತನು ಇತರ ಆರೋಪಿಗಳ ಜೊತೆ ಕೊಲೆಗೆ ಸಂಚು ರೂಪಿಸಿದ್ದ. ಈತನ ವಿರುದ್ಧವೂ ಅನೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಪೈಕಿ ಅಝರುದ್ದೀನ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇತರ ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ಕೊಲೆ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…