ರಾಜ್ಯದ ಅತೀ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಗ್ರಾಪಂ ಸದಸ್ಯ ಆಗಿರುವ ಹರೀಶ್ ಇಂಜಾಡಿ ಅವರು ಈ ಹಿಂದೆ ದೇವಸ್ಥಾನದ ಆಡಳಿತ ಮಂಡಳಿಗೆ ದೋಖಾ ಮಾಡಿ ಜೈಲುಪಾಲಾಗಿದ್ದ. ಈತನಿಗೆ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಿಫಾರಸು ಮಾಡಿದ್ದರು ಎಂದು ಹೇಳಲಾಗಿದೆ. ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇವಸ್ಥಾನಕ್ಕೆ ವಂಚನೆ ಮಾಡಿದ್ದ ಆರೋಪವನ್ನು ಹರೀಶ್ ಇಂಜಾಡಿ ಎದುರಿಸುತ್ತಿದ್ದಾನೆ. ಈ ಪ್ರಕರಣದಲ್ಲಿ ಬಂಧನವೂ ಆಗಿತ್ತು. ಹರೀಶ್‌ಗೆ ಸದಸ್ಯ ಸ್ಥಾನ ನೀಡಲು ಸುಬ್ರಹ್ಮಣ್ಯ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಧಾರ್ಮಿಕದತ್ತಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಗೆ ಸ್ಥಳೀಯರು ಪತ್ರ ಬರೆದಿದ್ದರು. ರೌಡಿಶೀಟರ್ ಆಗಿದ್ದ ಹರೀಶ್ ಇಂಜಾಡಿಯನ್ನು ಅಧ್ಯಕ್ಷನನ್ನಾಗಿ ಮಾಡಬೇಡಿ ಅಂತಾ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮರಳು ಮಾಫಿಯಾ ಮತ್ತು ಮರ ಕಳ್ಳ ಸಾಗಣೆ ಆರೋಪ ಈತ ಮೇಲಿದೆ ಎಂದು ಗಮನ ಸೆಳೆದಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷಗಾದಿಗೆ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ರೌಡಿಶೀಟರ್ ಎಂದಿದ್ದ ಕಾಂಗ್ರೆಸ್ ಆತನ ಮನೆಗೆ ಭೇಟಿ ನೀಡಿರಲಿಲ್ಲ.
ಇದೀಗ ದಿನೇಶ್ ಗುಂಡೂರಾವ್ ಅವರ ಶಿಫಾರಸಿನಂತೆ ಮಾಜಿ ರೌಡಿಶೀಟರ್‌ಗೆ ಕುಕ್ಕೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಮಾಜಿ ರೌಡಿ ಶೀಟರ್ ಆಯ್ಕೆ ಮಾಡಿರುವ ಕುರಿತು ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಮಂಜುನಾಥ ಭಂಡಾರಿ, ಪೊಲೀಸ್ ವೆರಿಫಿಕೇಶನ್ ನಡೆದ ಬಳಿಕವೇ ಈ ಆಯ್ಕೆ ಕಾನೂನು ಪ್ರಕಾರವಾಗಿ ನಡೆದಿದೆ. 2008ರ ಬಳಿಕ ಅವರ ಮೇಲೆ ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ. ಅಲ್ಲದೆ ರೌಡಿ ಶೀಟ್‌ನಿಂದ ಅವರ ಹೆಸರು ತೆಗೆಯಲಾಗಿದೆ ಎಂದು ಹರೀಶ್ ಪರ ಸಮರ್ಥನೆ ಮಾಡಿದ್ದಾರೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…