ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು – ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ

ಅವರು ಸೇತುವೆ ಕಾಮಗಾರಿಯ ವಿಳಂಬದ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸಂಬ0ಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿದರು. ಸೇತುವೆಯ ಕುರಿತು ಯಾವುದೇ ರೀತಿಯ ಕ್ರೆಡಿಟ್ ನನಗೆ ಬೇಡ, ಆದರೆ ಜನರಿಗೆ ಅನುಕೂಲವಾಗುವ ರೀತಿ ಸೇತುವೆ ಕಾಮಗಾರಿ ಪೂರ್ಣಗೊಳ್ಳಬೇಕು.

ಸೇತುವೆಗೆ ಸಂಬ0ಧಿಸಿ ಶಾಸಕರ ಗಮನಕ್ಕೆ ತಾರದೆ ಹಕ್ಕುಚ್ಯುತಿ ಮಾಡಿರುವ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರೆ ಅಧಿಕಾರಿಗಳೇ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು. ಸೇತುವೆಯ ಬಾಕಿಯಾಗಿರುವ ಎರಡು ಪಿಲ್ಲರ್‌ಗಳಿಗೆ ಸಂಬ0ಧಿಸಿ ಕಡತ ಕೆಆರ್‌ಡಿಸಿಎಲ್‌ಗೆ ಹೋಗಿರುವುದಾಗಿ ಕಾರ್ಯನಿರ್ವಾಹಕ ಎಂಜಿನಿಯರ್ ರಘು ಅವರು ಪ್ರಸ್ತಾಪಿಸಿದಾಗ ಶಾಸಕರು ದೂರವಾಣಿ ಮೂಲಕ ಚೀಫ್ ಎಂಜಿನಿಯರ್ ವಸಂತ ನಾಯ್ಕ್ ಅವರನ್ನು ಸಂಪರ್ಕಿಸಿ, ಶೀಘ್ರ ಅನುಮೋದನೆ ನೀಡುವಂತೆ ಸೂಚಿಸಿದರು. ಹಿಂದಿನ ಸರಕಾರದ ಅವಧಿಯಲ್ಲಿ ಈ ವಿಚಾರವನ್ನು ನನ್ನ ಗಮನಕ್ಕೆ ತಂದಿದ್ದರೆ ಆಗಲೇ ಸಂಬ0ಧಪಟ್ಟ ಸಚಿವರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತಿದ್ದೆ ಎಂದರು. ವಿವಿಧ ಸಮಸ್ಯೆಗಳ ಕುರಿತು ರೈತ ಸಂಘದ ಮುಂದಾಳು ಸರಪಾಡಿ ಅಶೋಕ ಶೆಟ್ಟಿ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದರ್ಶನ್, ಸರಪಾಡಿ ಗ್ರಾ.ಪಂ.ಸದಸ್ಯ ಧನಂಜಯ ಶೆಟ್ಟಿ ನಾಡಬೆಟ್ಟು, ಸ್ಥಳೀಯ ಮುಂದಾಳು ಶಶಿಕಾಂತ ಶೆಟ್ಟಿ ಆರುಮುಡಿ, ಮಣಿನಾಲ್ಕೂರು ಗ್ರಾ.ಪಂ.ಸದಸ್ಯ ಸಾಂತಪ್ಪ ಪೂಜಾರಿ ಹಟ್ಟದಡ್ಕ, ಮಣಿನಾಲ್ಕೂರು ಸಿಎ ಬ್ಯಾಂಕ್ ನಿರ್ದೇಶಕ ಪೂವಪ್ಪ ಪೂಜಾರಿ ಕಡಮಾಜೆ ಪ್ರಸ್ತಾಪಿಸಿದರು. ಜಿ.ಪಂ.ಮಾಜಿ ಸದಸ್ಯ ತುಂಗಪ್ಪ ಬಂಗೇರ, ಕಡೇಶ್ವಾಲ್ಯ ಸಿಎ ಬ್ಯಾಂಕ್ ಅಧ್ಯಕ್ಷ ವಿದ್ಯಾಧರ ರೈ ಪೆರ್ಲಾಪು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸಾಂತಪ್ಪ ಪೂಜಾರಿ, ಅಮರನಾಥ ಶೆಟ್ಟಿ ಕುರ್ಯಾಳ, ಕುಸುಮಾಕರ ಶೆಟ್ಟಿ ಕುರ್ಯಾಳ, ರಾಜೇಂದ್ರ ಪೂಜಾರಿ ಕಡಮಾಜೆ, ರವೀಂದ್ರ ಶೆಟ್ಟಿ ಕೈಯಾಳ, ಆನಂದ ಶೆಟ್ಟಿ ಬಾಚಕೆರೆ ಮೊದಲಾದವರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!