ಅವರು ಸೇತುವೆ ಕಾಮಗಾರಿಯ ವಿಳಂಬದ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸಂಬ0ಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿದರು. ಸೇತುವೆಯ ಕುರಿತು ಯಾವುದೇ ರೀತಿಯ ಕ್ರೆಡಿಟ್ ನನಗೆ ಬೇಡ, ಆದರೆ ಜನರಿಗೆ ಅನುಕೂಲವಾಗುವ ರೀತಿ ಸೇತುವೆ ಕಾಮಗಾರಿ ಪೂರ್ಣಗೊಳ್ಳಬೇಕು.
ಸೇತುವೆಗೆ ಸಂಬ0ಧಿಸಿ ಶಾಸಕರ ಗಮನಕ್ಕೆ ತಾರದೆ ಹಕ್ಕುಚ್ಯುತಿ ಮಾಡಿರುವ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರೆ ಅಧಿಕಾರಿಗಳೇ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು. ಸೇತುವೆಯ ಬಾಕಿಯಾಗಿರುವ ಎರಡು ಪಿಲ್ಲರ್‌ಗಳಿಗೆ ಸಂಬ0ಧಿಸಿ ಕಡತ ಕೆಆರ್‌ಡಿಸಿಎಲ್‌ಗೆ ಹೋಗಿರುವುದಾಗಿ ಕಾರ್ಯನಿರ್ವಾಹಕ ಎಂಜಿನಿಯರ್ ರಘು ಅವರು ಪ್ರಸ್ತಾಪಿಸಿದಾಗ ಶಾಸಕರು ದೂರವಾಣಿ ಮೂಲಕ ಚೀಫ್ ಎಂಜಿನಿಯರ್ ವಸಂತ ನಾಯ್ಕ್ ಅವರನ್ನು ಸಂಪರ್ಕಿಸಿ, ಶೀಘ್ರ ಅನುಮೋದನೆ ನೀಡುವಂತೆ ಸೂಚಿಸಿದರು. ಹಿಂದಿನ ಸರಕಾರದ ಅವಧಿಯಲ್ಲಿ ಈ ವಿಚಾರವನ್ನು ನನ್ನ ಗಮನಕ್ಕೆ ತಂದಿದ್ದರೆ ಆಗಲೇ ಸಂಬ0ಧಪಟ್ಟ ಸಚಿವರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತಿದ್ದೆ ಎಂದರು. ವಿವಿಧ ಸಮಸ್ಯೆಗಳ ಕುರಿತು ರೈತ ಸಂಘದ ಮುಂದಾಳು ಸರಪಾಡಿ ಅಶೋಕ ಶೆಟ್ಟಿ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದರ್ಶನ್, ಸರಪಾಡಿ ಗ್ರಾ.ಪಂ.ಸದಸ್ಯ ಧನಂಜಯ ಶೆಟ್ಟಿ ನಾಡಬೆಟ್ಟು, ಸ್ಥಳೀಯ ಮುಂದಾಳು ಶಶಿಕಾಂತ ಶೆಟ್ಟಿ ಆರುಮುಡಿ, ಮಣಿನಾಲ್ಕೂರು ಗ್ರಾ.ಪಂ.ಸದಸ್ಯ ಸಾಂತಪ್ಪ ಪೂಜಾರಿ ಹಟ್ಟದಡ್ಕ, ಮಣಿನಾಲ್ಕೂರು ಸಿಎ ಬ್ಯಾಂಕ್ ನಿರ್ದೇಶಕ ಪೂವಪ್ಪ ಪೂಜಾರಿ ಕಡಮಾಜೆ ಪ್ರಸ್ತಾಪಿಸಿದರು. ಜಿ.ಪಂ.ಮಾಜಿ ಸದಸ್ಯ ತುಂಗಪ್ಪ ಬಂಗೇರ, ಕಡೇಶ್ವಾಲ್ಯ ಸಿಎ ಬ್ಯಾಂಕ್ ಅಧ್ಯಕ್ಷ ವಿದ್ಯಾಧರ ರೈ ಪೆರ್ಲಾಪು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸಾಂತಪ್ಪ ಪೂಜಾರಿ, ಅಮರನಾಥ ಶೆಟ್ಟಿ ಕುರ್ಯಾಳ, ಕುಸುಮಾಕರ ಶೆಟ್ಟಿ ಕುರ್ಯಾಳ, ರಾಜೇಂದ್ರ ಪೂಜಾರಿ ಕಡಮಾಜೆ, ರವೀಂದ್ರ ಶೆಟ್ಟಿ ಕೈಯಾಳ, ಆನಂದ ಶೆಟ್ಟಿ ಬಾಚಕೆರೆ ಮೊದಲಾದವರಿದ್ದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…