ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿAದ ಜಾರಿಯಾಗಲಿದೆ.

ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ರು. ಇನ್ನು ಮುಂದೆ ಬೆಂಗಳೂರು ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದ್ರು.



