ಸುಳ್ಯ: ಕರಾವಳಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕರ್ನಾಟಕ ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ಕಲ್ಲಪಳ್ಳಿ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಬಟೋಳಿಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಈ ಘಟನೆಯು ಬಾಟೋಳಿ ಗಡಿ ಪ್ರದೇಶದಿಂದ ಸುಮಾರು 100 ಮೀಟರ್ ಮುಂದೆ ನಡೆದಿದೆ. ಗುಡ್ಡ ಕುಸಿತದಿಂದ ಪಾಣತ್ತೂರು ರಸ್ತೆ ಸಂಚಾರ ಸ್ಥಗಿತಗೊಂಡಿದೆ. ರಾತ್ರಿ ಸುರಿದ ಮಳೆಗೆ ಗುಡ್ಡ ಕುಸಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಹಿಂದೆ ಈ ಭಾಗದಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪ್ರಯಾಣಿಕರು ರಂಗತ್ತಮಲೆ ರಸ್ತೆಯನ್ನು ಪರ್ಯಾಯ ಮತ್ತು ತಾತ್ಕಾಲಿಕ ಮಾರ್ಗವಾಗಿ ಬಳಸಲು ಸೂಚಿಸಲಾಗಿದೆ.



