ಪಾಕಿಸ್ತಾನದ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿಲ್ಲ ಎಂದು ವಾದಿಸುತ್ತಿದ್ದ ಪಾಕ್ ಇದೀಗ ನಿಜ ಒಪ್ಪಿಕೊಂಡಿದೆ. ಭಾರತ ನಮ್ಮ ಮೇಲೆ ದಾಳಿ ಮಾಡಿದೆ, ನಮ್ಮ ವಾಯುನೆಲೆಗಳನ್ನು ಉಡಾಯಿಸಿದೆ ಎಂದು ಸ್ವತಃ ಪಾಕ್ ಪ್ರಧಾನಿಯೇ ಒಪ್ಪಿಕೊಂಡಿದ್ದಾರೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಮೇ 10 ರ ಮುಂಜಾನೆ ಭಾರತೀಯ ಬ್ಯಾಲಿಸ್ಟಿಕ್ ಕ್ಷಿಪಣಿಗಳು ನೂರ್ ಖಾನ್ ವಾಯುನೆಲೆ ಮತ್ತು ಪಾಕಿಸ್ತಾನದೊಳಗಿನ ಇತರ ವಾಯು ನೆಲೆ ಹಾಗೂ ಸಾರ್ವಜನಿಕ ಪ್ರದೇಶದ ಮೇಲೆ ದಾಳಿ ಮಾಡಿದೆ ಎಂದು ಹೇಳಿದ್ದಾರೆ. ಅವರು ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿ, ಭಾರತ ನಡೆಸಿದ ಕ್ಷಿಪಣಿ ದಾಳಿಯ ಬಗ್ಗೆ ಸೇನಾ ಮುಖ್ಯಸ್ಥ ಜನರಲ್ ಸೈಯದ್ ಅಸಿಮ್ ಮುನೀರ್ ಅವರು ಬೆಳಗಿನ ಜಾವ 2:30 ಕ್ಕೆ ಕರೆ ಮಾಡಿ ಎಲ್ಲವನ್ನು ವಿವರಿಸಿದರು ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ವಕ್ತಾರ ಅಮಿತ್ ಮಾಳವಿಯಾ ವಿಡಿಯೋವೊಂದುನ್ನು ಹಂಚಿಕೊಂಡಿದ್ದಾರೆ.
ಮೇ 9-10ರ ಮಧ್ಯರಾತ್ರಿ, ಬೆಳಗಿನ ಜಾವ 2:30 ರ ಸುಮಾರಿಗೆ, ಜನರಲ್ ಆಸಿಫ್ ಮುನೀರ್ ಫೋನ್ ಮೂಲಕ ಕರೆ ಮಾಡಿ, ಭಾರತ ನಮ್ಮ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಹೇಳಿದರು. ನೂರ್ ಖಾನ್ ವಾಯುನೆಲೆ ಮತ್ತು ಕೆಲವು ಇತರ ಪ್ರದೇಶಗಳ ಮೇಲೆ ದಾಳಿ ಮಾಡಿದೆ. ಎಂದು ಪ್ರಧಾನಿ ಷರೀಫ್ ಸಾರ್ವಜನಿಕ ಭಾಷಣದಲ್ಲಿ ಹೇಳಿಕೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…