ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಸುಬ್ರಹ್ಮಣ್ಯ – ಸಕಲೇಶಪುರ ರೈಲ್ವೆ ವಿದ್ಯುತ್ ಕಾಮಗಾರಿ ಹಿನ್ನೆಲೆ; ರೈಲು ಸಂಚಾರ ತಾತ್ಕಾಲಿಕ ಬಂದ್

ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.

ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರದಂದು ಸಂಚರಿಸುವ ಮಂಗಳೂರು ಜಂಕ್ಷನ್ ಟು ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ಸಹ ರದ್ದಾಗಲಿದೆ.

ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದಾಗಲಿದೆ. ಜೂನ್ 2ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟಿ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ಧಾಗಲಿದೆ.

ಇದಲ್ಲದೆ, ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಯಶವಂತಪುರ ಟು ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ಹಾಗೂ ಜೂನ್ 3ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ಸಹ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ತಿಳಿಸಿದೆ.

 

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!