ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.
ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರದಂದು ಸಂಚರಿಸುವ ಮಂಗಳೂರು ಜಂಕ್ಷನ್ ಟು ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ಸಹ ರದ್ದಾಗಲಿದೆ.
ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದಾಗಲಿದೆ. ಜೂನ್ 2ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟಿ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ಧಾಗಲಿದೆ.
ಇದಲ್ಲದೆ, ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಯಶವಂತಪುರ ಟು ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ಹಾಗೂ ಜೂನ್ 3ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ಸಹ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ತಿಳಿಸಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…