ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಮದ್ಯದ ದರ ಮತ್ತೊಮ್ಮೆ ಹೆಚ್ಚಳ

ಅಬಕಾರಿ ರಾಜಸ್ವ ಸಂಗ್ರಹದ ಗುರಿ ತಲುಪಲು ಪೂರಕವಾಗಿ ಸರ್ಕಾರವು ಕಡಿಮೆ ಬೆಲೆಯ ಐಎಂಎಲ್‌ ಮದ್ಯದ ದರವನ್ನೂ ಹೆಚ್ಚಳ ಮಾಡಿದ್ದು, ಹೊಸ ದರ ಗುರುವಾರದಿಂದಲೇ ಜಾರಿಗೆ ಬಂದಿದೆ.

ಮದ್ಯವನ್ನು ದರಕ್ಕೆ ಅನುಗುಣವಾಗಿ ಒಟ್ಟು 16 ಸ್ಲ್ಯಾಬ್‌ಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಒಂದರಿಂದ ಮೂರನೇ ಸ್ಲ್ಯಾಬ್‌ವರೆಗೂ ಪ್ರತಿ 180 ಎಂಎಲ್‌ ಬಾಟಲ್‌ ಮೇಲೆ ತಲಾ 15 ರು. ಹೆಚ್ಚಳ ಮಾಡಲಾಗಿದ್ದು, ನಾಲ್ಕನೇ ಸ್ಲ್ಯಾಬ್‌ನ ಮದ್ಯದ ಮೇಲೆ ತಲಾ 5 ರೂ. ದರ ಏರಿಕೆಯಾಗಿದೆ. ಒಟ್ಟಾರೆ ಶೇ.10 ರಿಂದ 20 ರಷ್ಟು ದರ ಹೆಚ್ಚಳವಾಗಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಬಿಯರ್‌ ದರವನ್ನೂ ಹೆಚ್ಚಳ ಮಾಡಿತ್ತು.

ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಎರಡು ಬಾರಿ ಐಎಂಎಲ್‌ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು. ಇದೀಗ ಮೂರನೇ ಸಲ ಐಎಂಎಲ್‌ ಮದ್ಯದ ದರ ಏರಿಸಲಾಗಿದೆ. 2024-25ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 38,525 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನಿಗದಿ ಮಾಡಲಾಗಿತ್ತು. ಆದರೆ ಅಪೇಕ್ಷಿತ ರಾಜಸ್ವ ಸಂಗ್ರಹವಾಗಿರಲಿಲ್ಲ.

ಪ್ರಸಕ್ತ ಸಾಲಿನಲ್ಲಿ ಅಬಕಾರಿ ಇಲಾಖೆಗೆ 40 ಸಾವಿರ ಕೋಟಿ ರು. ರಾಜಸ್ವ ಸಂಗ್ರಹದ ಗುರಿ ಇದ್ದು, ಇದಕ್ಕೆ ಪೂರಕವಾಗಿ ಐಎಂಎಲ್‌ ಮದ್ಯದ ದರ ಹೆಚ್ಚಳ ಮಾಡಲಾಗಿದೆ. 1 ರಿಂದ 4 ನೇ ಸ್ಲ್ಯಾಬ್‌ವರೆಗೂ ಕಡಿಮೆ ದರದ ಮದ್ಯಗಳು ಇರಲಿದ್ದು, ಶ್ರಮಿಕರು ಹೆಚ್ಚಾಗಿ ಉಪಯೋಗಿಸುವ ಮದ್ಯಗಳಾಗಿವೆ. ಇವುಗಳ ಬೆಲೆಯನ್ನು ಮಾತ್ರ ಹೆಚ್ಚಿಸಿದ್ದು ದುಬಾರಿ ಬೆಲೆಯ ಪ್ರೀಮಿಯಂ ಮತ್ತು ಸೆಮಿ ಪ್ರೀಮಿಯಂ ಮದ್ಯದ ದರ ಹೆಚ್ಚಳ ಮಾಡಿಲ್ಲ.

ಅಬಕಾರಿ ಸನ್ನದುಗಳ ಮೇಲಿನ ವಾರ್ಷಿಕ ಶುಲ್ಕ ಸೇರಿ ವಿವಿಧ ರೀತಿಯ ಶುಲ್ಕಗಳನ್ನೂ ಗಣನೀಯವಾಗಿ ಹೆಚ್ಚಿಸಲು ಮುಂದಾಗಿರುವ ಸರ್ಕಾರ, ಈ ಬಗ್ಗೆ ಕರಡು ಅಧಿಸೂಚನೆ ಪ್ರಕಟಿಸಿದೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗಿದೆ.

ಜು.1 ರಿಂದ ಶುಲ್ಕ ಹೆಚ್ಚಳ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಒಂದೊಮ್ಮೆ ಆಕ್ಷೇಪಣೆಗಳು ಬಾರದಿದ್ದರೆ ಸುಗ್ರೀವಾಜ್ಞೆ ಮೂಲಕ ಅಥವಾ ಮುಂಗಾರು ಅಧಿವೇಶನದಲ್ಲಿ ಮಂಡಿಸಿ ಇದಕ್ಕೆ ಅನುಮೋದನೆ ಪಡೆಯಬಹುದು.

ಡಿಸ್ಟಿಲರಿ ಮತ್ತು ಬ್ರೀವರಿಗೆ ಒಂದು ಲಕ್ಷ ರುಪಾಯಿಗೆ ಬದಲಾಗಿ ಎರಡು ಲಕ್ಷ ರು, 20 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ಮಹಾನಗರ ಪಾಲಿಕೆ ಪ್ರದೇಶಗಳ ವಾರ್ಷಿಕ ಶುಲ್ಕ 6.90 ಲಕ್ಷ ರು ಇದ್ದುದನ್ನು 13.90 ಲಕ್ಷ ರುಪಾಯಿಗೆ ಹೆಚ್ಚಳ ಮಾಡಲು ಉದ್ದೇಶಿಸಲಾಗಿದೆ.

ಇತರೆ ನಗರ ಪಾಲಿಕೆಗಳಲ್ಲಿ 10 ಲಕ್ಷ ರು., ನಗರ ಸಭೆ ವ್ಯಾಪ್ತಿಗೆ 9 ಲಕ್ಷ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ 8 ಲಕ್ಷ ರು. ಹಾಗೂ ವಾರ್ಷಿಕ ಪರವಾನಗಿ ಶುಲ್ಕವನ್ನು ಮೂರು ಪಟ್ಟು ಹೆಚ್ಚು ಮಾಡಲು ಸರ್ಕಾರ ನಿರ್ಧರಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!