ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ಪ್ರವಾಸದಲ್ಲಿರುವಾಗಲೇ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಗಾಯಗೊಂಡ ಹಮೀದ್ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಘಟನೆ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.



