ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಬಂಟ್ವಾಳ ಮತ್ತು ವಿಟ್ಲ ವ್ಯಾಪ್ತಿಯ ಒಟ್ಟು 580 ಅಂಗನವಾಡಿ ಕೇಂದ್ರಗಳ ಈ ಸಾಲಿನ ಚಟುವಟಿಕೆಗಳು ಕಾರ್ಯಾರಂಭಗೊAಡಿವೆ.
ಬಂಟ್ವಾಳ ಸಿಡಿಪಿಒ ಮಮ್ತಾಜ್ ಅವರು ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದ್ರು. ಮಕ್ಕಳನ್ನು ಸ್ವಾಗತಿಸುವ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರಗಳನ್ನು ಸಿಂಗರಿಸಿ. ಅಂದವಾಗಿ ವಿನ್ಯಾಸಗೊಳಿಸಲಾಗಿತ್ತು.
ಬಂಟ್ವಾಳದ ಬಿ.ಸಿ.ರೋಡ್‌ನಲ್ಲಿ ಡೇ ಕೇರ್ ಮಾದರಿಯಲ್ಲಿ ಕಂ ಕ್ರಶ್ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಇಲ್ಲಿ ಉದ್ಯೋಗಸ್ಥ ತಾಯಂದಿರು ತಮ್ಮ ಶಿಶುಗಳನ್ನು ಇಲ್ಲಿ ಬೆಳಗ್ಗೆ ಬಿಟ್ಟುಹೋಗುವ ಸೌಲಭ್ಯವಿದೆ. ಅಂಗನವಾಡಿ ಕೇಂದ್ರಗಳನ್ನು ಸಂಪರ್ಕಿಸಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಿಡಿಪಿಒ ಮಮ್ತಾಜ್ ತಿಳಿಸಿದ್ರು. ಈ ಸಂದರ್ಭ ಸಿಡಿಪಿಒ ಕಚೇರಿ ಸಿಬ್ಬಂದಿ, ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಸಿಬಂದಿ ಉಪಸ್ಥಿತರಿದ್ರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…