ಜಮ್ಮು-ಕಾಶ್ಮೀರದ ಪೆಹಲ್ಗಮ್‌ನಲ್ಲಿ ಏಪ್ರಿಲ್ 22ರಂದು ನಡೆದ 26 ಮಂದಿ ಪ್ರವಾಸಿಗರ ನರಮೇಧ ಹತ್ಯೆಯ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ನಡೆಸಿದ ‘ಅಪರೇಷನ್ ಸಿಂಧೂರ’ ಯಶಸ್ವಿಯಾಗಿದೆ.

ಈ ಹಿನ್ನೆಲೆಯಲ್ಲಿ ಮೇ 20 ರಂದು ದಕ್ಷಿಣ ಕನ್ನಡ ಸಿಂಧೂರ ವಿಜಯೋತ್ಸವ ಸಮಿತಿಯು ಬೃಹತ್ ತಿರಂಗ ಮೆರವಣಿಗೆ ಸಂಘಟಿಸಿದೆ ಎಂದು ಸಂಚಾಲಕ ಕೇಶವ ನಂದೋಡಿ ಹೇಳಿದ್ದಾರೆ. ಇವರು ಮಂಗಳೂರಿನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿ, ಮಧ್ಯಾಹ್ನ 3 ಗಂಟೆಗೆ ಮಂಗಳೂರು ನಗರದ ಪಿವಿಎಸ್ ವೃತ್ತದಿಂದ ಕರಾವಳಿ ಉತ್ಸವ ಮೈದಾನದವರೆಗೆ ಮೆರವಣಿಗೆ ನಡೆಯಲಿದ್ದು, ಬಳಿಕ ಸಂಜೆ 5ಗಂಟೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅಂದಾಜು 8 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸುವ ನಿರೀಕ್ಷೆ ಇದೆ ಎಂದ್ರು. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಗುರುದತ್ತ ನಾಯಕ್, ಶಾಂತಾರಾಮ್ ಉಪಸ್ತಿತರಿದ್ರು.



