ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಜೊತೆಗೆ ಘಟನಾ ಸ್ಥಳಕ್ಕೆ ಎಸ್.ಪಿ.ಯತೀಶ್ ಎನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ಸಂಪೂರ್ಣ ಮಾಹಿತಿ ಪಡೆದುಕೊಂಡು ಆರೋಪಿಗಳ ಶೀಘ್ರ ಬಂಧನಕ್ಕೆ ಸೂಚನೆ ನೀಡಿದ್ದಾರೆ. ವೈಯಕ್ತಿಕ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಈ ಹಿಂದೆ ಗಲಾಟೆಗಳು ನಡೆದಿದೆ.
ಅದರ ಮುಂದುವರಿದ ಭಾಗ ಕೊಲೆಯತ್ನ ನಡೆದಿದೆಯಾ? ಎಂಬ ಸಂಶಯ ಪೋಲೀಸರಿಗೆ ವ್ಯಕ್ತವಾಗಿದ್ದು, ಇದಕ್ಕೆ ಪೂರಕವಾಗಿ ಹಾಗೂ ವಿವಿಧ ಆಯಾಮಗಳಲ್ಲಿ ಪೋಲೀಸ ತನಿಖೆ ಪ್ರಾರಂಭವಾಗಿದ್ದು, ಈಗಾಗಲೇ ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹಮೀದ್ ಅವರ ಕೈಗೆ ಬಲವಾದ ಏಟು ಬಿದ್ದಿದ್ದು, ಶಸ್ತ್ರ ಚಿಕಿತ್ಸೆ ನಡೆದಿದೆ ಎನ್ನಲಾಗಿದೆ. ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ನಿಂತುಕೊಂಡಿದ್ದ ಹಮೀದ್ ಅವರನ್ನು ಬೈಕ್‍ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಚಾಕು ಹಾಕಿ ಪರಾರಿಯಾಗಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…